ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಈ ಪೈಕಿ ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧಿತರಾದ ದರ್ಶನ್ ಅವರು ಜೈಲಿನಲ್ಲಿ ಮಾಡಿಕೊಂಡ ಅವಾಂತರಗಳು ಒಂದೆರಡಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಅವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಸಾಬೀತು ಪಡಿಸುವ ಫೋಟೋಗಳು ಹೊರ ಬಂದವು. ಈ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಆ ಬಳಿಕ ದರ್ಶನ್ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತು.
ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೆ, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಮೊದಲು ವಾದ ಮಂಡಿಸಿದರು. ‘ಇದು ಭೀಕರ ಕೊಲೆ ಕೇಸ್. ಏಳು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ರದ್ದಾಗಬೇಕು ಎನ್ನುವುದು ನಮ್ಮ ವಾದ. ಅಪಾರ್ಟ್ ಮೆಂಟ್ ಬಳಿ ಡೆಡ್ ಬಾಡಿ ಸಿಕ್ಕಿದೆ’ ಎಂದು ಅವರು ವಾದಿಸಿದರು. ಸದ್ಯ ಏಳು ಆರೋಪಿಗಳ ಜಾಮೀನನ್ನು ಮಾತ್ರ ರದ್ದು ಮಾಡಬೇಕು ಎಂದು ಕೋರಿದರು.ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಿಲ್ಲ. ಹೀಗಾಗಿ, ಅವರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿ ಎಂದು ಸರ್ಕಾರಿ ಪರ ವಕೀಲರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಆಗ ಸಿದ್ದಾರ್ಥ್ ಲೂತ್ರಾ ಅವರು ಎಲ್ಲವನ್ನೂ ವಿವರವಾಗಿ ಹೇಳಿದರು.ದರ್ಶನ್ ಹಾಗೂ ಪವಿತ್ರಾ ಸಂಬಂಧ, ದರ್ಶನ್ ಕೊಲೆಯಲ್ಲಿ ಭಾಗಿ ಆಗಿದ್ದಕ್ಕೆ ಸಿಕ್ಕ ಸಾಕ್ಷಿಗಳು, ಜಾಮೀನು ಸಿಕ್ಕ ಬಳಿಕ ಸಾಕ್ಷಿಗಳ ಜೊತೆ ದರ್ಶನ್ ಕಾಣಿಸಿಕೊಂಡಿದ್ದು ಸೇರಿದಂತೆ ಎಲ್ಲವನ್ನೂ ವಿವರಿಸಿದರು.ವಿದೇಶದಲ್ಲಿ ದರ್ಶನ್ದರ್ಶನ್ ಅವರು ಇದೇ ತಿಂಗಳು 15ರಂದು ಥೈಲ್ಯಾಂಡ್ಗೆ ಪ್ರವಾಸ ಬೆಳೆಸಿದ್ದಾರೆ. ‘ಡೆವಿಲ್’ ಸಿನಿಮಾ ಶೂಟಿಂಗ್ಗೆ ಅವರು ಅಲ್ಲಿಗೆ ಹೋಗಿದ್ದಾರೆ. ಹಾಡಿನ ಚಿತ್ರೀಕರಣ ಹಾಗೂ ಒಂದು ಫೈಟ್ ದೃಶ್ಯದ ಶೂಟ್ ಬಾಕಿ ಇದೆ. ಜುಲೈ 25ರಂದು ಅವರು ಬೆಂಗಳೂರಿಗೆ ಮರಳಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



