ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 11 ಜನ ಹೃದಯಾಘಾತಕ್ಕೆ ಬಲಿ ಆಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 21,700 ಮಂದಿ ಇಸಿಜಿ ಮಾಡಿಸಿದ್ದಾರೆ. ಅದರಲ್ಲಿ 11,335 ಮಂದಿ ಅಬ್ ನಾರ್ಮಲ್ ಹಾಗೂ 1533 ಮಂದಿ ಕ್ರಿಟಿಕಲ್ ಆಗಿರುವುದಾಗಿ ತಿಳಿದು ಬಂದಿದೆ. ಇನ್ನು 442 ಜನರಿಗೆ ಹಠಾತ್ ಹೃದಯಾಘಾತ ಆಗಿರುವುದಾಗಿ ತುಮಕೂರು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ. ಜೊತೆಗೆ ಹಾಸನದಲ್ಲಿ ಕಳೆದ ತಿಂಗಳು ಸಂಭವಿಸಿದ ಹೃದಯಾಘಾತಗಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರೋಗ್ಯ ಇಲಾಖೆ ವರದಿ ನೀಡುವಂತೆ ಸೂಚನೆ ನೀಡಿತ್ತು. ಅದರ ಬೆನ್ನಲ್ಲೇ ರಾಜ್ಯದಲ್ಲಿ ಹೃದಯಾಘಾತ ಆಗುವುದಕ್ಕೆ ಕಾರಣ ಏನು ಎಂಬುದರ ಬಗ್ಗೆ ಹೃದ್ರೋಗ ತಜ್ಞರು ಚರ್ಚೆ ನಡೆಸುತ್ತಿದ್ದಾರೆ. ಹೃದಯಾಘಾತ ಹೆಚ್ಚಾದ ಬೆನ್ನಲ್ಲೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಚೆಕಪ್ ಗಾಗಿ ಆಗಮಿಸುತ್ತಿರುವುದಾಗಿ ವರದಿ ಆಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



