ಮೈಸೂರು: ಆಷಾಢ ಮಾಸದ 3ನೇ ಶುಕ್ರವಾರದ ಹಿನ್ನೆಲೆಯಲ್ಲಿ ಹಲವಾರು ಗಣ್ಯರ ಜತೆಗೆ 2 ಲಕ್ಷಕ್ಕೂ ಅಧಿಕ ಜನರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರಿಂದ ದೇವಿಯ ದರ್ಶನಕ್ಕೆ ಅನಾನುಕೂಲ ಉಂಟಾಗಿತ್ತು. ಇದರಿಂದ ಭಕ್ತರು ಆಕ್ರೋಶ ವ್ಯಕ್ತಪಡಿಸಿ ದ್ದು, ಡೀಸಿ, ಪೋಲಿಸ್ ಆಯುಕ್ತ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.ರಾಜ್ಯದ ವಿವಿಧ ಭಾಗಗಳಿಂದಧಾವಿಸಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.ನಾವು ಸಚಿವರು, ಶಾಸಕರಿಂದ ಶಿಫಾರಸು ಪತ್ರ ತಂದಿದ್ದೇವೆ ಎನ್ನುವ ವಿಐಪಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸಮಸ್ಯೆಯಾಯಿತು. ಅವ್ಯವಸ್ಥೆ ವಿಚಾರ ತಿಳಿದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೋಲಿಸ್ಆಯುಕ್ತ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲಿಸಿದ್ದರು. ಚಾಮುಂಡೇಶ್ವರಿ ಪ್ರಾಧಿಕಾರದ ಕಾ ರ್ಯದರ್ಶಿ ಎಂ.ಜೆ. ರೂಪಾ ಸೀಮಾ ಲಾಟ್ಕರ್. ಏನಿದು ಅವ್ಯ ವಸ್ಥೆ? ದರ್ಶನಕ್ಕೆ ಹೋಗುವ ಬಾಗಿಲ ಕೀ ಯಾಕೆ ಹಾಕ್ಸಿದ್ದೀರಾ? ಎಂದು ತರಾ ಟೆಗೆ ತೆಗೆದುಕೊಂಡರು.
ಗಣ್ಯರಿಂದ ದರ್ಶನ:
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವೆ ಲಕ್ಷ್ಮೀ ಹೆಬ್ಬಾಳರ್, ಸಂಸದ ಬಿ.ವೈ.ರಾಘ ವೇಂದ್ರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕರಾದ ಎ.ಮಂಜು, ಕೊತ್ತೂರು ಮಂಜುನಾಥ್, ಬಾಲಕೃಷ್ಣ, ಶರವಣ, ನಟರಾದ ಶಶಿಕುಮಾರ್, ” ವಸಿಷ್ಠ ಸಿಂಹ, ನಟಿ ಕಾರುಣ್ಯ ದೇವಿಯ ದರ್ಶನ ಪಡೆದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



