ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ
ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಈ ಹೊತ್ತಲ್ಲೇ ಬಿಸಿಸಿಐ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ.
ಇದು ಪಂದ್ಯದ ದಿನಗಳಲ್ಲಿ ತಂಡಗಳಿಗೆ ಅಭ್ಯಾಸ ಸೆಷನ್, ಫಿಟ್ನೆಸ್ ಪರೀಕ್ಷೆ ನಿಷಿದ್ಧ. ಪಿಚ್ ರಕ್ಷಣೆ ಇದರ ಮುಖ್ಯ ಉದ್ದೇಶವಾಗಿದೆ.
ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಈ ಪಂದ್ಯ ನಡೆಯಲಿದೆ. ಹೊಸ ನಿಯಮ ಈ ಬಾರಿಯ ಸೀಸನ್ ಮೇಲೆ ಸಾಕಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ, ಬಿಸಿಸಿಐ ಅಭ್ಯಾಸ ಪ್ರದೇಶದಲ್ಲಿ ಎರಡು ನೆಟ್ಗಳನ್ನು ನಿರ್ಮಾಣ ಮಾಡಲಿದೆ. ಎರಡು ತಂಡಗಳು ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅಭ್ಯಾಸ ಮಾಡುತ್ತಿದ್ದರೆ, ಎರಡೂ ತಂಡಕ್ಕೆ ತಲಾ ಎರಡು ಪಿಚ್ಗಳನ್ನು ನೀಡಲಾಗುತ್ತದೆ.
ತಂಡಗಳು ತಮ್ಮ ಎದುರಾಳಿ ತಂಡಗಳಿಗೆ ಮೀಸಲಿಟ್ಟ ಜಾಗವನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅವು ಖಾಲಿ ಇದ್ದರೂ ಸಹ ಅದನ್ನು ಬಳಸುವಂತಿಲ್ಲ.
ನ್ಯಾಯ ಕಾಪಾಡಿಕೊಳ್ಳುವುದು ಇದರ ಮುಖ್ಯ ಉದ್ದೇಶ. ಪಂದ್ಯದ ದಿನಗಳಲ್ಲಿ ತಂಡಗಳು ತಮ್ಮ ಆಟಗಾರರಿಗೆ ಫಿಟ್ನೆಸ್ ಪರೀಕ್ಷೆಗಳನ್ನು ನಡೆಸಲು ಅನುಮತಿ ಇಲ್ಲ.
