ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಬಂಧಿತರನ್ನು ಭುವನ್ ಗೌಡ ಹಾಗೂ ರಾಜೇಶ್ ಎಂದು ಗುರುತಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 2ರಂದು ಟಿ ಓಬಣ್ಣ ಮತ್ತು ಗಂಗಾಧರ ಎಂಬುವವರನ್ನು ಬಂಧಿಸಲಾಗಿತ್ತು.ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.
ಇನ್‌ಸ್ಟಾಗ್ರಾಂ ಖಾತೆಗಳಿಂದ ಆರೋಪಿಗಳು ರಮ್ಯಾ ಅವರಿಗೆ ಅಶ್ಲೀಲ ಹಾಗೂ ಬೆದರಿಕೆ ಸಂದೇಶವನ್ನು ಕಳುಹಿಸಿದ್ದರು. ಆ ಖಾತೆಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಮತ್ತು ವಿವಿಧ ಜಿಲ್ಲೆಗಳಲ್ಲಿರುವ ಖಾತೆಗಾರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಈ ಸಂಬಂಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ, ‘ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಕಿರಣ ಇದ್ದಂತೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿ’ ಎಂದು ಬರೆದಿದ್ದರು. ಇದರಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡ ಆರೋಪಿಗಳು ರಮ್ಯಾ ಅವರನ್ನು ನಿಂದಿಸಿದ್ದರು. ಅಶ್ಲೀಲವಾಗಿ ಕಮೆಂಟ್ ಮಾಡುವುದಲ್ಲದೆ, ಅಶ್ಲೀಲ ಮತ್ತು ಬೆದರಿಕೆ ಸಂದೇಶವನ್ನು ಕಳುಸಿಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



