ಮೈಸೂರು: ನನ್ನ ಪ್ರಕಾರ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ನವೆಂಬರ್ ತಿಂಗಳಿಗೆ ನಮ್ಮ ತಂದೆ ಎರಡೂವರೆ ವರ್ಷ ಪೂರೈಸುತ್ತಾರೆ. ಮುಖ್ಯಮಂತ್ರಿ ಆಗುವ ಆಸೆ ಇಟ್ಟು ಕೊಂಡಿರೋರು ಕೇಳ್ತಾರೆ. ಕೇಳೋದ್ರಲ್ಲಿ ತಪ್ಪಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ತೀರ್ಮಾನ ಮಾಡೋದು ಹೈಕಮಾಂಡ್ ಹಾಗೂ ಶಾಸಕರು. ಸಿಎಂ ಬದಲಾವಣೆ ಹೈಕಮಾಂಡ್ ಮುಂದೆ ಇಲ್ಲ.
ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನುಸ್ಪಷ್ಟಪಡಿಸಿದ್ದಾರೆ. ಸರ್ಕಾರ ಬಂದಾಗಿನಿಂದ ಈ ಪ್ರಶ್ನೆಗೆ ಉತ್ತರ ಕೊಡುತ್ತಿದ್ದೇನೆ. ದಯವಿಟ್ಟು ಆ ಪ್ರಶ್ನೆ ಕೇಳಬೇಡಿ ಎಂದು ಹೇಳಿದರು.ಕೇಂದ್ರ ಓಬಿಸಿ ಕಮಿಟಿಗೆ ಸಿದ್ದರಾಮಯ್ಯ ನೇಮಕ ಪ್ರಶ್ನೆಗೆ ಕೆಂಡಮಂಡಲರಾದ ಅವರು, ಯಾರ್ರಿ ಹೇಳಿದ್ದು? ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದರೆ ಪ್ರಮೋ ಷನ್ನಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಕಮಿಟಿಯಲ್ಲಿದ್ದಾರೆ. ಹೀಗಾಗಿ, ಅಲ್ಲಿ ಸದಸ್ಯರಾಗಿರುತ್ತಾರೆ. ಅದು ಪ್ರಮೋಷನಾ..? ನೀವೇ ಕಾಮನ್ ಸೆನ್ಸ್ ಉಪಯೋಗಿಸಿ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



