ಭಾನುವಾರ ಬಿಡುಗಡೆ ಆದ ದರ್ಶನ್ ಅವರ ‘ದಿ ಡೆವಿಲ್’ ಚಿತ್ರದ ಮೊದಲ ಹಾಡು ‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಎಂಬ ಸಾಂಗ್ ಈಗ ಅಭಿಮಾನಿಗಳ ನೆಚ್ಚಿನ ಗೀತೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀಕ್ಷಣೆ ಜೊತೆಗೆ ಟ್ರೆಂಡ್ ಆಗುವ ಮೂಲಕ ದಾಖಲೆ ಬರೆದಿದೆ.ರಿಲೀಸ್ ಆದ ಕೇವಲ 24 ಗಂಟೆಗಳಲ್ಲಿ ಯೂಟ್ಯೂಬ್ನಲ್ಲಿ ಸ್ಯಾಂಡಲ್ವುಡ್ನ ಫಾಸ್ಟೆಸ್ಟ್ 10 ಮಿಲಿಯನ್+ ವ್ಯೂವ್ಸ್’ ರೆಕಾರ್ಡ್ ಕ್ರಿಯೇಟ್ ಮಾಡಿದ ಹಾಡು, ಯೂಟ್ಯೂಬ್ನಲ್ಲಿ #1 ಟ್ರೆಂಡಿಂಗ್ನಲ್ಲಿದೆ. ಈ ಮಾಹಿತಿಯನ್ನು ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಹಂಚಿಕೊಂಡಿದೆ.ಅಷ್ಟೊಂದು ಕ್ರೇಜ್ ಕ್ರಿಯೇಟ್ ಮಾಡಿರೋ ಈ ಹಾಡಿನ ಮೇಲೆ ಈಗ ಟ್ಯೂನ್ ಕದ್ದ ಆರೋಪ ಕೇಳಿ ಬಂದಿದ್ದು ದಿವಂಗತ ನಟ ಸಂಚಾರಿ ವಿಜಯ್ ಅಭಿನಯಿಸಿರುವ ‘ನಾನು ಅವನಲ್ಲ ಅವಳು’ ಸಿನಿಮಾದ ಟ್ಯೂನ್ ಕದ್ದ ಆರೋಪ ಕೇಳಿಬಂದಿದೆ. ಇದು ಕದ್ದ ಹಾಡು ಎಂದು ಹಲವರು ವಾದ ಮಾಡುತ್ತಿದ್ದಾರೆ. ಅದಕ್ಕೆ ಬೇಕಾದ ಸಾಕ್ಷ್ಯ ಕೂಡಾ ನೀಡುತ್ತಿದ್ದಾರೆ.
ಯಾವ ಚಿತ್ರದ ನಕಲು ಗೊತ್ತಾ?
ಅಂದಹಾಗೆ, ಇದ್ರೆ ನೆಮ್ದಿಯಾಗ್ ಇರ್ಬೇಕ್’ ಹಾಡು 2015ರಲ್ಲಿ ಬಿಡುಗಡೆಯಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್ ಅವರ ‘ನಾನು ಅವನಲ್ಲ ಅವಳು’ ಸಿನಿಮಾದ ಮೂರು ಹಾಡುಗಳ ಪೈಕಿ ‘ವಾರೆ ವಾರೆ’ ಹಾಡಿನ ನಕಲು ಆಗಿದೆ ಎಂದು ಹಲವರು ವಾದಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇವೆರಡೂ ಸಾಂಗ್ ಗಳನ್ನು ಹೋಲಿ ಮಾಡುತ್ತಾ ಚರ್ಚಿಸುತ್ತಿದ್ದಾರೆ.ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹಾಗಾಗಿ, ಆಗಸ್ಟ್ 14ರಂದು ದರ್ಶನ್ ತೂಗುದೀಪ ಸೇರಿದಂತೆ ಆರೋಪಿಗಳು ಅರೆಸ್ಟ್ ಆಗಿ ಮತ್ತೆ ಜೈಲು ಸೇರಿದ್ದಾರೆ.ಜೈ ಮಾತಾ ಕಂಬೈನ್ಸ್ ಲಾಂಛನದಲ್ಲಿ ಪ್ರಕಾಶ್ ವೀರ್ ನಿರ್ದೇಶಿಸಿ, ನಿರ್ಮಿಸಿರುವ ಸಿನಿಮಾ ಇದೇ ವರ್ಷದ ಡಿಸೆಂಬರ್ 12 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ. ಈ ಕ್ಷಣಕ್ಕಾಗಿ ದಾಸನ ಹೆಚ್ಚಿನ ಸಂಖ್ಯೆ ಅಭಿಮಾನಿಗಳು ಎದುರು ನೋಡುತ್ತಿದ್ದು, ಸಿನಿಮಾ ಎಷ್ಟರ ಮಟ್ಟಿಗೆ ಗೆಲುವು ಕಾಣಲಿದೆ? ಎಂಬುದನ್ನು ಕಾದು ನೋಡಬೇಕಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







