ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಬಿ.ಕೆ ಹರಿಪ್ರಸಾದ್ ಸೇರಿದಂತೆ ಪಕ್ಷದ ನಾಯಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದಾರೆ. ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ. ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು’ ಎಂದು ಖಡಕ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಉತ್ತರ ನೀಡುವಾಗ, ಆರ್ ಎಸ್ ಎಸ್ ಸಿದ್ಧಾಂತದ ಅರಿವಿದೆ ಎಂದು ಕಾಲೆಳೆದೆ ಅಷ್ಟೆ. ಅದು ಬಿಟ್ಟರೆ ಇನ್ನೇನಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾನು ಹೊಸದಾಗಿ ಕಾಂಗ್ರೆಸ್ ಸೇರಿಲ್ಲ, ಯಾರ ಪಾಠವೂ ಅಗತ್ಯವಿಲ್ಲ. ನನಗೂ ಗಾಂಧಿ ಕುಟುಂಬಕ್ಕೂ ಭಕ್ತ ಭಗವಂತನ ನಡುವಿರುವ ಸಂಬಂಧ. ರಾಜಕಾರಣಕ್ಕೆ ಬರೋದಕ್ಕಿಂತಲೂ ಮುನ್ನ ಎಲ್ಲಾ ಪಕ್ಷಗಳ ಅಧ್ಯಯನ ಮಾಡಿದ್ದೇನೆ. ನನ್ನ ಮಾತು ಯಾರಿಗಾದರೂ ನೋವಾಗಿದ್ದರೆ ಬೇಕಾದರೆ ಕ್ಷಮೆ ಕೇಳೋಣ. ಬಿ.ಕೆ ಹರಿ ಪ್ರಸಾದ್ ಅವರಿಗೂ ಕ್ಷಮೆ ಕೇಳೋಣ ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







