ತುಮಕೂರು: ಅವರು ಆರ್ಎಸ್ಎಸ್ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್ವಿರುದ್ಧಕಿಡಿಕಾರಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ ,ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







