ಚಿತ್ರದುರ್ಗ: ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು (Money Theft) ಪಾರಾರಿಯಾಗಿದ್ದ. ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿ ಬೆನ್ನತ್ತಿ ಹೆಡೆಮುರಿ ಕಟ್ಟಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿಯೊಂದಿಗೆ ಬಳ್ಳಾರಿಯಲ್ಲಿ ಜಮೀನು ಮಾರಾಟ ಮಾಡಲು ಬಾಡಿಗೆ ಕಾರಿನಲ್ಲಿ ತೆರಳಿದ್ದರು. ಅಲ್ಲಿ ಸರಿ ಸುಮಾರು 97 ಲಕ್ಷ ರೂ.ಗೆ ಜಮೀನು ಮಾರಾಟ ಮಾಡಿದ್ದು, ಕಾರಲ್ಲಿಯೇ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ಚಳ್ಳಕೆರೆಯಲ್ಲಿ ಊಟಕ್ಕೆಂದು ಕಾರು ನಿಲ್ಲಿಸಿ ತೆರಳಿದ್ದರು. ಆಗ ಕಾರು ಚಾಲಕ ಇವರಿಗೆ ಗೊತ್ತಿಲ್ಲದೇ 97 ಲಕ್ಷ ಹಣದೊಂದಿಗೆ ಕಾರು ಸಮೇತ ಪರಾರಿಯಾಗಿದ್ದಈ ಬಗ್ಗೆ ನಿವೃತ್ತ ಎಸ್ಪಿ ಗುರುಪ್ರಸಾದ್ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಚ್ಚೆತ್ತ ಪೊಲೀಸರ ತಂಡ ಕಳ್ಳನ ಪತ್ತೆಗೆ ಬಲೆ ಬೀಸಿದ್ದರು. ಆರೋಪಿ ರಮೇಶ್ ಮೂಲತಃ ಆಂಧ್ರದ ಹಿಂದೂಪುರ ಮೂಲದವನಾದ ಹಿನ್ನೆಲೆ ಆಂಧ್ರದತ್ತ ಪ್ರಯಾಣ ಬೆಳೆಸಿ ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿದ್ದರು. ಆಂಧ್ರದ ಬಳಿ ರಮೇಶ್ ಕಾರು ಮರಕ್ಕೆ ಡಿಕ್ಕಿಯಾಗಿತ್ತು. ಕೂಡಲೇ ಆರೋಪಿಯನ್ನು ಸೆರೆಹಿಡಿದ ಪೊಲೀಸರು 97 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ ರಮೇಶ್ ಚಳ್ಳಕೆರೆ ಪಟ್ಟಣದ ಹೋಟೆಲ್ ಬಳಿಯಿಂದ ಕಾರು ಸಮೇತ ಎಸ್ಕೇಪ್ ಆಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಜಾಡು ಹಿಡಿದು ಬೆನ್ನತ್ತಿದ್ದ ಪೊಲೀಸರು ಆತನ ಹೆಡೆಮುರಿಕಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







