ಬೆಂಗಳೂರು: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ (Rain Alert) ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ.ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 03ವರೆಗೂ ವ್ಯಾಪಕ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಹಗುರದಿಂದ, ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಅಧಿಕಾರಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







