ಡೆಹ್ರಾಡೂನ್: ಉತ್ತರಾಖಂಡದ (Uttarakhand) ರುದ್ರಪ್ರಯಾಗ, (Rudraprayag) ಚಮೋಲಿ, (Chamoli) ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ (Cloudburst) ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗಿವೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ಮತ್ತು ಮಂದಾಕಿನಿ ನದಿಗಳ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ಹನುಮಾನ್ ದೇವಾಲಯ ಮುಳುಗಡೆಯಾಗಿದೆಶ್ರೀನಗರ ಮತ್ತು ರುದ್ರಪ್ರಯಾಗ ನಡುವಿನ ಬದರಿನಾಥ ಹೆದ್ದಾರಿ ಮುಳುಗಡೆಯಾದ ಹಿನ್ನೆಲೆ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಯಾತ್ರಿಕರನ್ನು ಪರ್ಯಾಯ ಮಾರ್ಗಗಳ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.ಇನ್ನೂ ಕೇದಾರನಾಥ ಕಣಿವೆಯ ಲಾವಾರಾ ಗ್ರಾಮದಲ್ಲಿಯೂ ಭೀಕರ ಪ್ರವಾಹ ಉಂಟಾಗಿದೆ. ಪರಿಣಾಮ ರಸ್ತೆಯ ಸೇತುವೆಯೊಂದು ಕೊಚ್ಚಿಹೋಗಿದ್ದು, ಚೆನಾಗಡ್ನಲ್ಲಿಯೂ ಗಂಭೀರ ಪರಿಸ್ಥಿತಿ ಉಂಟಾಗಿದೆ. ಭಾರೀ ಮಳೆಯ ಹಿನ್ನೆಲೆ ರುದ್ರಪ್ರಯಾಗ, ಬಾಗೇಶ್ವರ, ಚಮೋಲಿ, ಹರಿದ್ವಾರ ಮತ್ತು ಪಿಥೋರಗಢ ಜಿಲ್ಲೆಗಳಾದ್ಯಂತ ಇಂದು (ಆ.29) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







