ಬೆಂಗಳೂರು: ಡಿ.ಕೆ ಶಿವಕುಮಾರ್ ರಾಜಕಾರಣಕ್ಕೆ ಹೊಸಬರಲ್ಲ. ಅವರಿಗೆ ಎಲ್ಲಾ ರೀತಿಯ ರಾಜಕೀಯ ಜ್ಞಾನ ಇದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಭಾಗಿಯಾದ ವಿಚಾರ ಮತ್ತು ಡಿ.ಕೆ ಶಿವಕುಮಾರ್ ಅವರನ್ನ ಬಿಟ್ಟು ಸಿಎಂ ಟೀಂ ಹೋಗಿದೆ ಎಂಬ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಯುತ್ತಿದೆ. ಅದಕ್ಕಾಗಿ ನಾವು, ಸಿಎಂ ಎಲ್ಲಾ ಹೋಗಿದ್ವಿ. ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷರು. ಅವರು ಡಿಸಿಎಂ ಅನ್ನೋದಕ್ಕಿಂತ ಹೆಚ್ಚಾಗಿ ನಮ್ಮ ಪಕ್ಷದ ಅಧ್ಯಕ್ಷರು. ಅವರದ್ದೇ ಆದ ಗೌರವ, ಘನತೆ ಪಕ್ಷಕ್ಕೆ ಇರೋ ಅಂತಹದ್ದು ಇದೆ ಎಂದಿದ್ದಾರೆಡಿ.ಕೆ ಶಿವಕುಮಾರ್ ರಾಜಕಾರಣಕ್ಕೆ ಹೊಸಬರು ಅಲ್ಲ. ಅವರು ಸಮರ್ಥರು ಇದ್ದಾರೆ. ಎಲ್ಲಾ ರೀತಿಯಲ್ಲೂ ಅವರಿಗೆ ರಾಜಕೀಯ ಜ್ಞಾನ ಇದೆ. ಅವರನ್ನು ಆ ರೀತಿ ಐಸೋಲೇಶನ್ ಮಾಡಿದ್ರು ಅಂತೆಲ್ಲಾ ಮಾತಾಡೋದು ಸರಿಯಿಲ್ಲ. ಇನ್ನೂ, ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







