ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯು ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ರಾಜ್ಯ ಚುನಾವಣಾ ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ ರಾಜ್ಯ ಚುನಾವಣಾ ಆಯೋಗದಿಂದ ಈವರೆವಿಗೂ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ.ರಾಜ್ಯ ಚುನಾವಣಾ ಆಯೋಗವು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಮೂಲಕ ಪತ್ರಿಕಾ ಗೋಷ್ಠಿಯನ್ನು ಕರೆದು ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುತ್ತದೆ. ಅದುದರಿಂದ, ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿಯು ಸುಳ್ಳು ಮಾಹಿತಿಯಾಗಿರುವುದಾಗಿ ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







