ಚಳ್ಳಕೆರೆ: ತಾಲೂಕಿನ ಸಾಣೀಕೆರೆ ಗ್ರಾಪಂ ವ್ಯಾಪ್ತಿಯ ಹೆಗ್ಗೆರೆ ಹೊಟ್ಟೆಜ್ಜನಕಟ್ಟೆಯಲ್ಲಿ ವಾಸವಿರುವ ರೈತ ಶ್ರೀನಿವಾಸ ಮನೆಗೆ ಬೀಗಹಾಕಿಕೊಂಡು ಜಮೀನಿನ ಕೆಲಸ ನೋಡಿ ವಾಪಾಸ್ ಬರುವಷ್ಟರಲ್ಲಿ ಮನೆಯ ಮೇಲ್ಬಾಗದ ಛಾವಣಿಯಿಂದ ಕಳ್ಳರು ಒಳಪ್ರವೇಶಿಸಿ ಸುಮಾರು 5 ಲಕ್ಷ ಮೌಲ್ಯದ ಮಾಂಗಲ್ಯ ಸರ, ಕಿವಿ ಓಲೆ ಹಾಗೂ ಬಂಗಾರ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಹಾಡುಹಗಲೇ ನಡೆದ ಈ ಘಟನೆ ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಜಮೀನಿನಿಂದ ವಾಪಾಸ್ ಬಂದ ರೈತ ಶ್ರೀನಿವಾಸ್ ಬೀರಿನ ಬಾಗಿಲು ಒಡೆದಿರುವುದನ್ನು ನೋಡಿ ಗಾಬರಿಯಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ. ಅಲ್ಲಿನ ಸಾರ್ವಜನಿಕರು ತಿಳಿಸುವಂತೆ ಮಧ್ಯಾಹ್ನದ ವೇಳೆಯಲ್ಲಿ ಹೆಲೈಟ್ ಧರಿಸಿ ಇಬ್ಬರು ವ್ಯಕ್ತಿಗಳು ಮೋಟಾರ್ಬೈಕ್ನಲ್ಲಿ ಕೆಲಹೊತ್ತು ಸುತ್ತಾಡಿದ್ದಾರೆ. ಸ್ವಲ್ಪ ಸಮಯದ ನಂತರ ಕಳ್ಳತನ ನಡೆದಿದ್ದು, ಬೈಕ್ನಲ್ಲಿ ಬಂದವರೇ ಈ ಕೃತ್ಯವೆಸಗಿರಬಹುದು ಎಂದು ಊಹಿಸಲಾಗಿದೆ. ಡಿವೈಎಸ್ಪಿ ಟಿ.ಬಿ.ರಾಜಣ್ಣ, ಠಾಣಾ ಇನ್ಸ್ಪೆಕ್ಟರ್ ಕೆ. ಕುಮಾರ್ ಮತ್ತು ಸಿಬ್ಬಂದಿ ವರ್ಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







