ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ನೀಡಿದ್ದಾರೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಹಿನ್ನೆಲೆ ಕನ್ನಡದ ನಟಿ ರನ್ಯಾರಾವ್ ರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. DRI ತನಿಖೆಯಲ್ಲಿ, ರನ್ಯಾ ರಾವ್ ಸುಮಾರು 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಚಿನ್ನ ಕಳ್ಳಸಾಗಣೆ ಮಾಡಿದ್ದರು ಎಂದು ಬಹಿರಂಗಗೊಂಡಿತ್ತು.ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ. ಇನ್ನು ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (COFEPOSA) ಜಾರಿ ಮಾಡಲಾಗಿದ್ದು, ಈ ವಿಷಯವನ್ನು ನಿರ್ವಹಿಸುವ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







