ಬೆಂಗಳೂರು: ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ ನೇತಾರರು. ಅನೇಕರ ಬದುಕಿನಲ್ಲಿ ಬದಲಾವಣೆಗೆ ಕಾರಣರಾದವರು. ಎಸ್ಐಟಿ ಆರ್ಥಿಕ ರಚನೆಗೂ ಮೊದಲು ಆರೋಪ ಮಾಡಿದವರ ಪೂರ್ವಾಪರ ವಿಚಾರ ಮಾಡಬೇಕಿತ್ತು ಎಂದು ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯಾರು ಯಾರ ವಿರುದ್ಧ ಆರೋಪ ಮಾಡಿದರೂ ವಿಶೇಷ ತನಿಖಾ ತಂಡವನ್ನು ರಚನೆ ಮಾಡುತ್ತೀರಾ? ನಿಮ್ಮ ಮೇಲೂ ಆರೋಪ ಮಾಡಿದ್ದರು. ಇದಕ್ಕೂ ಎಸ್ಐಟಿ ರಚನೆ ಮಾಡುವಿರಾ ಎಂದು ಸಿ.ಟಿ. ರವಿ ಅವರು ಖಾರವಾಗಿ ಪ್ರಶ್ನಿಸಿದರು.ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದ ಬಳಸಿದ್ದಕ್ಕಾಗಿ 12 ಜನರ ವಿರುದ್ಧ ಪ್ರಕರಣ ದಾಖಲಾಗಿ ಬಂಧಿಸಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಆರೋಪ ಮಾಡಿದವರ ಪೈಕಿ ಎಷ್ಟು ಜನರನ್ನು ಬಂಧಿಸಿದಿರಿ? ನೀವು ಮಾಡಿದ ರಾಜಕಾರಣದ ವಿರುದ್ಧ ನಾವು ತಿರುಗಿಬಿದ್ದಿದ್ದೇವೆ. ಈ ಪ್ರಕರಣದಲ್ಲಿ ಚೆನ್ನೈ, ವಿದೇಶಗಳಿಂದಲೂ ಹಣ ಬಂದಿದೆ. ನೀವು ಪಕ್ಷ ರಾಜಕಾರಣ ಮಾಡಬಾರದು ಎಂದೇ ಎನ್ಐಎ ತನಿಖೆಗೆ ವಹಿಸಿ ಎಂದು ಒತ್ತಾಯಿಸುತ್ತಿದ್ದೇವೆ ಪ್ರತಿಪಾದಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







