ಬೆಂಗಳೂರು: ʻಲಕ್ಷ್ಮೀ ನಿವಾಸʼ ಧಾರಾವಾಹಿಯ ನಿರ್ಮಾಣಕ್ಕಾಗಿ ಸೃಜನ್ ಲೋಕೇಶ್ ಅವರ ʻಲೋಕೇಶ್ ಪ್ರೊಡಕ್ಷನ್ಸ್ʼ ಸಂಸ್ಥೆಯಿಂದ ನಿರ್ಮಾಪಕ ಸತ್ಯ ಮತ್ತು ಅವರ ಪತ್ನಿ ನಿರ್ಮಲಾ 1 ಕೋಟಿ ರೂಪಾಯಿ ಸಾಲ ಪಡೆದು, ಹಿಂತಿರುಗಿಸದೆ ವಂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸೃಜನ್ ಲೋಕೇಶ್ ಮ್ಯಾನೇಜರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಲಕ್ಷ್ಮೀ ನಿವಾಸʼ ಧಾರಾವಾಹಿಯ ನಿರ್ಮಾಣಕ್ಕಾಗಿ ಸೃಜನ್ ಲೋಕೇಶ್ ಅವರ ಲೋಕೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಾಪಕ ಸತ್ಯ ಮತ್ತು ಅವರ ಪತ್ನಿ ನಿರ್ಮಾಲಾ1 ಕೋಟಿ ರೂಪಾಯಿ ಹಣವನ್ನು ಸಾಲವಾಗಿ ಪಡೆದಿದ್ದರು.2023ರ ನವೆಂಬರ್ನಲ್ಲಿ ಒಪ್ಪಂದ ಮಾಡಿಕೊಂಡಿದ್ದ ಆರೋಪಿಗಳು, 2024ರ ಏಪ್ರಿಲ್ 1ರಿಂದ ಪ್ರತಿ ತಿಂಗಳು 5 ಲಕ್ಷ ರೂಪಾಯಿ ಕಂತುಗಳಲ್ಲಿ ಹಣವನ್ನ ವಾಪಾಸ್ ಕೊಡುವುದಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಆದರೆ ಇದುವರೆಗೂ ಯಾವುದೇ ಹಣ ಪಾವತಿಸದ ಹಿನ್ನೆಲೆ, MOUನಲ್ಲಿರುವ ಷರತ್ತು ಉಲ್ಲಂಘಿಸಿದ್ದಕ್ಕಾಗಿ ದೂರು ದಾಖಲಾಗಿದೆ.ಸೃಜನ್ ಲೋಕೇಶ್ ಅವರ ಲೋಕೇಶ್ ಸಂಸ್ಥೆಯ ಜಿಪಿಎ ಹೋಲ್ಡರ್ ಅಗ್ನಿಯು ಸಾಗರ್ ಎಂಬುವವರು ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ನಿರ್ಮಾಪಕ ಸತ್ಯ ಮತ್ತು ಅವರ ಪತ್ನಿ ನಿರ್ಮಲಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸಾಯಿ ನಿರ್ಮಲಾ ಪ್ರೊಡಕ್ಷನ್ಸ್ ಕಂಪನಿಯ ಹೆಸರಿನಲ್ಲಿ ನಡೆದ ಹಣಕಾಸಿನ ವಹಿವಾಟುಗಳು ತನಿಖೆಗೆ ಒಳಪಟ್ಟಿವೆ ಎಂದು ಹೇಳಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







