ಚಿತ್ರದುರ್ಗ: ಬೆಂಗಳೂರು ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರೋಟರಿ ಬೆಂಗಳೂರು ಗ್ಲೋಬಲ್ ಯೋಗ, ರೋಟರಿ ಬೆಂಗಳೂರು ಕಲ್ಯಾಣ್ ಹಾಗೂ ಯೋಗ ಯುನಿವರ್ಸಿಟಿ ಆಫ್ ದಿ ಅಮೆರಿಕಾಸ್ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಯೋಗ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಯೋಗಾಚಾರ್ಯ ಎಲ್.ಎಸ್.ಚಿನ್ಮಯಾನಂದ ಇವರಿಗೆ ಯೋಗ ಸಾಧನೆಗಾಗಿ ಜೀವಮಾನ ಶ್ರೇಷ್ಠ ಪ್ರಶಸ್ತಿ,ಮಲ್ಲಾಡಿಹಳ್ಳಿಯ ಯೋಗ ತರಬೇತುದಾರ ಸಂತೋಷ್ ಕುಮಾರ್ ಇವರಿಗೆ ಯೋಗ ರತ್ನ ಪ್ರಶಸ್ತಿ, ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಯೋಗ ಚಿಕಿತ್ಸಕ ಎಂ.ಬಿ ಮುರುಳಿ ಇವರಿಗೆ ಯೋಗ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಗೌರಿಗದ್ದೆ ಅವಧೂತ ವಿನಯ್ ಕುಮಾರ್ ಗುರೂಜಿ, ವಿದ್ಯಾ ವಾಚಸ್ಪತಿ ಅರಳು ಮಲ್ಲಿಗೆ ಪಾರ್ಥ ಸಾರಥಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಚಿವ ಹೆಚ್.ಎಂ. ರೇವಣ್ಣ, ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಅಧ್ಯಕ್ಷ ಯೋಗಿ ದೇವರಾಜ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







