ಕುಶಾಲನಗರ: ಧರ್ಮಸ್ಥಳ ಬುರುಡೆ ಗ್ಯಾಂಗ್ ಸದಸ್ಯರು ಕೊಡಗಿಗೂ ಭೇಟಿ ನೀಡಿದ್ದು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಗ್ಗೆ ಗೊಂದಲ ಮೂಡಿಸಿ, ಅಪಪ್ರಚಾರ ನಡೆ ಸುವ ಕಾರ್ಯಾಚರಣೆಯಲ್ಲಿ ತೊಡಗಿ ಕೊಂಡಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.2024ರ ಡಿಸೆಂಬರ್ ನಲ್ಲಿ ಗ್ಯಾಂಗ್ ನ ಸದಸ್ಯರಾದ ಟಿ.ಜಯಂತ್, ಬೆಂಗಳೂರು ಮತ್ತು ಮಂಗಳೂರಿಗೆ ಸೇರಿದ ಕೆಲವು ಅನಾಮಿಕ ವ್ಯಕ್ತಿಗಳು ವಿರಾಜಪೇಟೆ, ಸುಂಟಿಕೊಪ್ಪ, ಕುಶಾಲನಗರ ವ್ಯಾಪ್ತಿಗೆ ಆಗಾಗ ಭೇಟಿ ನೀಡಿ, ಕೆಲವು ನಿಗೂಢ ಸಭೆಗಳನ್ನು ನಡೆಸಿದ್ದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮಹಿಳಾ ಸದಸ್ಯರನ್ನು ಭೇಟಿ ಮಾಡಿ, ಅವರ ಮೂಲಕ ಕೆಲವು ಕಪೋಲಕಲ್ಪಿತ ದೂರುಗಳನ್ನು ಒತ್ತಾಯ ಪೂರ್ವಕವಾಗ ಪಡೆದು ಪೊಲೀಸ್ ಠಾಣೆಗೆ ನೀಡುವಲ್ಲಿ ಯಶಸ್ವಿಯಾಗಿದ್ದರು. ಮಹಿಳೆಯಿದ ಹೇಳಿಕೆಗಳನ್ನು. ವಿಡಿಯೋ ಮಾಡುವ ಮೂಲಕ ಯೂಟ್ಯೂಬರ್ಸ್ಗಳಿಗೆ ಅವಧಿ ನಿಸಿ, ಅದನ್ನು ಎಲ್ಲೆಡೆ ಪ್ರಚಾರ ಮಾಡುವ ಹುನ್ನಾರ ನಡೆಸಿದ್ದರು.
ಈ ಬಗ್ಗೆ ಮಾಹಿತಿ ದೊರೆತ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಸೇರಿದಂತೆ ಕ್ಷೇತ್ರದ ಭಕ್ತಾಭಿಮಾನಿಗಳು, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ದೂರು ನೀಡಿದ್ದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







