ನಟಿ ಭಾವನಾ ರಾಮಪ್ಪ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದುರ್ವಿಧಿ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ತಾಯಿ ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ 8 ತಿಂಗಳಿಗೆ ಹೆರಿಗೆ ಮಾಡಿಸಲಾಗಿದೆ. ಈ ವೇಳೆ ಒಂದು ಮಗು ಮೃತಪಟ್ಟಿದೆ. ಇದೀಗ ಹೆಣ್ಣು ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.40 ವರ್ಷದ ಕನ್ನಡದ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಅವರು ತಾಯಿಯಾಗುವ ಸಂಭ್ರಮದಲ್ಲಿದ್ದು ಅದೂ ಅವಳಿ ಜವಳಿ ಮಕ್ಕಳಿಗೆ. ಮದುವೆಯಾಗದೆ ಸಿಂಗಲ್ ಮದರ್ ಅನಿಸಿಕೊಳ್ಳುತ್ತಿರುವ ಭಾವನಾ ಐವಿಎಫ್ ಚಿಕಿತ್ಸೆ ಮೂಲಕ ಅವಳಿ ಮಕ್ಕಳನ್ನು ತಮ್ಮ ಜೀವನಕ್ಕೆ ಬರಮಾಡಿಕೊಂಡಿದ್ದಾರೆ. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಒಂದು ಮಗು ಸಾವನ್ನಪ್ಪಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







