ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಸೇರಿದ ಬ್ಯಾಂಕ್ ಲಾಕರ್ಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 24.50 ಕೆ.ಜಿಯಷ್ಟು ಚಿನ್ನದ ಗಟ್ಟಿಗಳು ಮತ್ತು 17 ವಜ್ರದ ಉಂಗುರಗಳನ್ನು ಪತ್ತೆ ಮಾಡಿದ್ದಾರೆ.ಇ.ಡಿ ವಿಚಾರಣೆ ವೇಳೆ ವೀರೇಂದ್ರ ಅವರು ನೀಡಿದ್ದ ಮಾಹಿತಿ ಆಧಾರದ ಮೇರೆಗೆ ಚಿತ್ರದುರ್ಗ ಮತ್ತು ಚಳ್ಳಕೆರೆ ವಿವಿಧ ಬ್ಯಾಂಕ್ಗಳಲ್ಲಿ ಶನಿವಾರ ಶೋಧ ಕಾರ್ಯ ಆರಂಭಿಸಲಾಗಿತ್ತು. ಭಾನುವಾರ ಬೆಳಗ್ಗೆಯವರೆಗೂ ಶೋಧ ನಡೆಯಿತು. ವೀರೇಂದ್ರ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ಇನ್ನಷ್ಟು ಲಾಕರ್ ಗಳು ಇದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ. ಈಗಾಗಲೇ ತೆರೆಯಲಾಗಿರುವ ಲಾಕರ್ಗಳಲ್ಲಿ,ಕಂತೆಗಟ್ಟಲೆ ಅಸ್ತಿದಾಖಲೆ ಪತ್ರಗಳು ಪತ್ತೆಯಾಗಿವೆ.ವೀರೇಂದ್ರ ಅವರಿಗೆ ಸೇರಿದ ಕಾರುಗಳ ನೋಂದಣಿ ಕಾರ್ಡ್ ಪತ್ತೆಯಾಗಿತ್ತು. ಅವುಗಳ ಆಧಾರದಲ್ಲಿ ಆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅದರಲ್ಲಿ ಅಗ್ಗದ ಬೆಲೆಯ ಒಂದು ಎಸ್ಯುವಿ ಮಾತ್ರವೇ ವೀರೇಂದ್ರ ಹೆಸರಿನಲ್ಲಿ ಇದ್ದು, ಮರ್ಸಿನ ಬೆಂಜ್ ಕಂಪನಿಯ ಆರು ಕಾರುಗಳು ಬೇರೆಯವರ ಹೆಸರಿನಲ್ಲಿವೆ.ಇಂದು ಇ ಡಿ ಅಧಿಕಾರಿಗಳು ವೀರೇಂದ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಮತ್ತಷ್ಟು ದಿನ ಇಡಿ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







