ಚಿತ್ರದುರ್ಗ: ಹಿಂದೂ ಮಹಾಗಣಪತಿ ವಿಸರ್ಜನೆಯ ಮೆರವಣಿಗೆ ವೇಳೆ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕಾಪಾಡುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ಚಿತ್ರದುರ್ಗ ಗಡಿ ಪ್ರವೇಶಿಸದಂತೆ ಪ್ರತಿಬಂಧ ಕಾಜ್ಞೆ ಹೊರಡಿಸಲಾಗಿದೆ.ಸೆಪ್ಟೆಂಬರ್ 8 ರಿಂದ 15 ರವರೆಗೆ ಶರಣ್ ಪಂಪ್ ವೆಲ್ ಚಿತ್ರದುರ್ಗ ಜಿಲ್ಲೆ ಪ್ರವೇಶ ನಿಷಿದ್ಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ವೆಂಕಟೇಶ್ ಆದೇಶಿಸಿದ್ದಾರೆ.ಶರಣ್ ಪಂಪ್ ವೆಲ್ ಪ್ರಚೋಧನಕಾರಿ ಭಾಷಣ ಹೇಳಿಕೆ ನೀಡುವ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದಿದ್ದಾರೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅವರ ವಿರುದ್ಧ 22 ಪ್ರಕರಣ ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ವರದಿ ಸಲ್ಲಿಸಿದೆ.ಜಿಲ್ಲೆಯ ಭರಮಸಾಗರ, ಹೊಸದುರ್ಗ ಹಾಗೂ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮಗಳು ನಡೆಯಬೇಕಿದ್ದು, ಎಲ್ಲಾ ಮುಂಜಾಗ್ರತೆ ಹಿನ್ನೆಲೆಯಲ್ಲಿ ಶರಣ್ ಅವರ ಜಿಲ್ಲೆ ಪ್ರವೇಶ ನಿಷೇಧಿಸಲಾಗಿದೆ.ಒಂದು ವೇಳೆ ಶರಣ್ ಭಾಷಣ ಮಾಡಿದಲ್ಲಿ ಸಾರ್ವಜನಿಕರು ವೀಡಿಯೋ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಕೋಮು ಸಾಮರಸ್ಯ ಹಾಳಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ವರದಿ ಮಾಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







