ಚಿತ್ರದುರ್ಗ : ಜಿಲ್ಲಾ ವಕ್ಫ್ ಸಲಹಾ ಸಮಿತಿ ಅವಧಿ ಮುಕ್ತಾಯವಾಗಿರುವುದರಿಂದ ಹೊಸದಾಗಿ ಅಧ್ಯಕ್ಷರ ಆಯ್ಕೆ ಕುರಿತು ಬೋರ್ಡ್
ಮೀಟಿಂಗ್ನಲ್ಲಿ ಚರ್ಚಿಸಿ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಸೈಯದ್ ಅಫಾಖ್ ಅಹಮದ್ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಲ್ಲಿ ಮನವಿ ಮಾಡಿದರು.ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅವಧಿ ಜುಲೈ ತಿಂಗಳಲ್ಲಿ ಮುಕ್ತಾಯಗೊಂಡಿರುವುದರಿಂದ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿರುವನಾನು ಶಿಕ್ಷಣ ಇಲಾಖೆಯಲ್ಲಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದೇನೆ. ಜಿಲ್ಲಾ ವಕ್ಫ್ ಬೋರ್ಡ್ನಲ್ಲಿ ಆಡಳಿತಾಧಿಕಾರಿಯಾಗಿ
ಸೇವೆ ಸಲ್ಲಿಸಿರುವ ಅನುಭವವಿದೆ. ಹಾಗಾಗಿ ಹೊಸ ಅಧ್ಯಕ್ಷರ ನೇಮಕದಲ್ಲಿ ನನಗೆ ಆದ್ಯತೆ ನೀಡುವಂತೆ ವಕ್ಫ್ ಸಚಿವರಿಗೆ ಹಾಗೂ
ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ, ಹನ್ನೊಂದು ಸದಸ್ಯರುಗಳಿಗೆ ಮನವಿ ನೀಡಿದ್ದೇನೆಂದರು.ಖಯ್ಯೂಂ, ಪುರುಷೋತ್ತಮ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







