ಏಷ್ಯಾದಲ್ಲೇ ಬೃಹತ್ ಗಣೇಶೋತ್ಸವ ಎಂಬ ಖ್ಯಾತಿ ಪಡೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಸಂದರ್ಭದಲ್ಲಿ
ಡಿಜೆ ಬಳಕೆಗೆ ಅವಕಾಶ ಕಲ್ಪಿಸುವಂತೆ ಹಾಗೂಶೋಭಾಯಾತ್ರೆ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಬಸವಮೂರ್ತಿ ಮಾದಾರ
ಚನ್ನಯ್ಯ ಸ್ವಾಮೀಜಿ ಇಂದು ಬೆಳಿಗ್ಗೆ ಗೃಹ ಸಚಿವರಾದಡಾ.ಜಿ.ಪರಮೇಶ್ವರ್ ಭೇಟಿ ಮಾಡಿ ಮನವಿ ಮಾಡಿದರು.ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮಾದರ ಚೆನ್ನಯ್ಯ ಶ್ರೀಗಳ ಮನವಿಗೆ ಗೃಹಸಚಿವರು ಸ್ಪಂದಿಸಿದ್ದುಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಈ ವೇಳೆ ಚಿತ್ರದುರ್ಗದ ಮಾಜಿ ಸಂಸತ್ ಸದಸ್ಯರಾದ ಬಿ.ಎನ್ ಚಂದ್ರಪ್ಪ ಸಹ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







