ಮಂಡ್ಯ: ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್ಗೆ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಟ್ಣದಾದ್ಯಂತ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ.ಭಾನುವಾರ ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಿಡಿಗೇಡಿಗಳ ಕಲ್ಲುತೂರಾಟ ಖಂಡಿಸಿ ಮದ್ದೂರು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಮುಂಜಾನೆಯಿಂದಲೇ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಂದ್ಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸ್ವಯಂಪ್ರೇರಿತರಾಗಿ ವ್ಯಾಪಾರಸ್ಥರು ಅಂಗಡಿ ಬಾಗಿಲು ಮುಚ್ಚಿ ಬಂದ್ ಯಶಸ್ವಿಗೊಳಿಸಿದ್ದಾರೆ. ಮೆಡಿಕಲ್ ಸ್ಟೋರ್, ಹಾಲಿನ ಬೂತ್ ಹಾಗೂ ತರಕಾರಿ ಅಂಗಡಿಗಳ ಹೊರತುಪಡಿಸಿದರೆ ಉಳಿದೆಲ್ಲಾ ವ್ಯಾಪಾರ-ವಹಿವಾಟು ನಿಲ್ಲಿಸಿ ಮದ್ದೂರು ಜನತೆ ಬಂದ್ಗೆ ಬೆಂಬಲ ನೀಡಿದ್ದಾರೆ. ಇನ್ನೂ ಮದ್ದೂರು ಬಂದ್ ಹಿನ್ನೆಲೆ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಟೌನ್ ರೌಂಡ್ಸ್ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶಗಳಾದ ರಾಮ್ ರಹೀಮ್ ನಗರ, ಸಿದ್ಧಾರ್ಥನಗರ, ಚನ್ನೇಗೌಡ ಬಡಾವಣೆಯಲ್ಲೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 4 ಎಸ್ಪಿ, 4 ಅಡಿಷನಲ್ ಎಸ್ಪಿ, 15 ಡಿವೈಎಸ್ಪಿ, 35 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್, 10 ಡಿಆರ್, 15 ಕೆಎಸ್ಆರ್ಪಿ ತುಕಡಿ ಸೇರಿ ಒಟ್ಟು 1500 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ಪ್ರತಿಭಟನೆ, ರ್ಯಾಲಿ ನಡೆಸದಂತೆ ಸೂಚನೆ ನೀಡಲಾಗಿದ್ದು, ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಈ ವೇಳೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಭಾನುವಾರ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿದೆ. ನಿನ್ನೆ ಹಲವು ಸಂಘಟನೆಗಳು ಪ್ರತಿಭಟನೆ ಮಾಡಿವೆ. ಇಂದು ಮದ್ದೂರು ಪಟ್ಟಣ ಬಂದ್ಗೆ ಕರೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿದ್ದೇವೆ. ನಿಷೇಧಾಜ್ಞೆ ಸಹ ಜಾರಿ ಮಾಡಿದ್ದೇವೆ. ಬಂದ್ ಬಳಸಿಕೊಂಡು ಕಿಡಿಗೇಡಿಗಳು ಬಂಧಿತರ ಬಗ್ಗೆ ನಾವು ಇನ್ನೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ. 26 ಜನರನ್ನು ನಾವು ಲಿಸ್ಟ್ ಮಾಡಿದ್ದೇವೆ. ಈ ಪೈಕಿ 22 ಮಂದಿಯನ್ನು ಬಂಧನ ಮಾಡಿದ್ದೇವೆ. ಇನ್ನೂ 4 ಜನರನ್ನು ಬಂಧಿಸಬೇಕಾಗಿದೆ. ನಾಲ್ವರು ತಲೆಮರಿಸಿಕೊಂಡಿದ್ದಾರೆ, ಅವರ ಹುಡುಕಾಟ ನಡೆಯುತ್ತಿದೆ. ಇನ್ನೂ ಹಲವು ಸಿಸಿ ಕ್ಯಾಮರಾ ದೃಶ್ಯ ವೀಕ್ಷಣೆ ಮಾಡುತ್ತಿದ್ದೇವೆ ಎಂದಿದ್ದಾರೆ.ಒಟ್ಟಾರೆ ಮೊನ್ನೆ ನಡೆದ ಘಟನೆಯಿಂದಾಗಿ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಸರ್ಕಾರ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸದಿದ್ದರೇ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







