ಕೊಪ್ಪಳ: ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣ ಇದೀಗ ದೆಹಲಿ ಅಂಗಳ ತಲುಪಿದೆ. ರಾಜ್ಯ ಬಿಜೆಪಿ (BJP) ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಮನವಿ ಮಾಡಿಕೊಂಡಿದ್ದಾರೆ.ಸೋಮವಾರ (ಸೆ.8) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ್ ಆರ್.ಅಶೋಕ್ ಸೇರಿದಂತೆ ಇತರರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಗವಿಸಿದ್ದಪ್ಪ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆಆ.3ರಂದು ಕೊಪ್ಪಳದ (Koppal) ವಾರ್ಡ್ ನಂಬರ್ 3ರ ಮಸೀದಿ ಮುಂಭಾಗದಲ್ಲಿ ಗವಿಸಿದ್ದಪ್ಪನ ಹತ್ಯೆ ನಡೆದಿತ್ತು. ಸಾಧಿಕ್ ಎನ್ನುವ ಯುವಕ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಈ ಪ್ರಕರಣವನ್ನು ಎನ್ಐಎ (NIA) ತನಿಖೆಗೆ ವಹಿಸುವಂತೆ ಗವಿಸಿದ್ದಪ್ಪ ಪೋಷಕರು ಹಾಗೂ ಬಿಜೆಪಿ ನಾಯಕರು ಆಗ್ರಹಿಸಿದ್ದರು. ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ್ದೆವು, ಆಗ ರಾಜ್ಯಪಾಲರು ಕೊಪ್ಪಳ ಪೊಲೀಸರಿಂದ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದರು ಎಂದು ತಿಳಿಸಿದರು.ಸದ್ಯ ಗವಿಸಿದ್ದಪ್ಪ ಕೊಲೆ ಕೇಸ್ನ್ನು ಎನ್ಐಎ ತನಿಖೆಗೆ ವಹಿಸಿ ಎಂದು ಬಿಜೆಪಿ ನಾಯಕರು ಅಮಿತ್ ಶಾ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







