ಬೆಂಗಳೂರು: ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 62 ಜನ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರು ಇವರು. ಹುತಾತ್ಮರಾದವರಿಗೆ 50 ಲಕ್ಷ ಪರಿಹಾರ ನೀಡಲಿದ್ದೇವೆ ಎಂದು ಭರವಸೆ ನೀಡಿದರು. ಈಗ ಹವಾಮಾನ ಬದಲಾವಣೆ ದೊಡ್ಡ ಮಟ್ಟದ ಸಮಸ್ಯೆಯಾಗುತ್ತಿದೆ. ಏಕಾಏಕಿ ಮೇಘಸ್ಫೋಟ, ಅತಿಯಾದ ಮಳೆ ಬರುತ್ತಿದೆ. ಮನುಕುಲವೇ ನಾಶವಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಕರ್ನಾಟಕವೂ (Karnataka) ಕೂಡ ಡೇಂಜರ್ ಝೋನ್ನಲ್ಲಿದೆ. ಭೂ ಕುಸಿತ ಸಂಭವಿಸುತ್ತಿದೆ. ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಇದಕ್ಕೆ ಪರಿಹಾರ. ರಾಜ್ಯದಲ್ಲಿ ಸಂಪತ್ತು ಭರಿತವಾದ ಅರಣ್ಯವಿದೆ. ಪಶ್ಚಿಮ ಘಟ್ಟದಲ್ಲಿ ವಿವಿಧ ಪ್ರಭೇದ ಜೀವ ವೈವಿಧ್ಯ ತಾಣಗಳು ಇದೆ. ಮಳೆ ಮಾರುತವನ್ನು ಬದಲಾವಣೆ ಮಾಡಿ, ಮಳೆಯನ್ನು ತರಿಸುವ ಶಕ್ತಿ ಪಶ್ಚಿಮ ಘಟ್ಟಗಳಿಗೆ ಇದೆ. 2 ಲಕ್ಷ ಎಕ್ರೆ ಭೂಮಿಯ ಒತ್ತುವರಿಯಾಗಿದೆ. ಮೂವತ್ತು- ನಲವತ್ತು ಸಾವಿರ ಎಕ್ರೆ ಭೂಮಿಯನ್ನು ಮರುವಶಪಡಿಸಿಕೊಂಡು ಸಂರಕ್ಷಿತ ತಾಣ ಅಂತಾ ಘೋಷಿಸಿದ್ದೇವೆ ಎಂದರು. ಐದು ಹುಲಿಗಳು ಮೃತಪಟ್ಟಿದ್ದು ಬಹಳ ನೋವಾಗಿತ್ತು. ಸಿಎಂ ಕೂಡ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಅರಣ್ಯ ಭೂಮಿ ಕಡಿಮೆ ಇದೆ. ಹೀಗಾಗಿ ಇದರೆ ಬಗ್ಗೆಯೂ ವ್ಯವಸ್ಥೆಗೆ ಅಧ್ಯಯನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







