ಚಿತ್ರದುರ್ಗ: ನಾಳೆ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಎಂದು ನಗರಕ್ಕೆ ಎಂಟ್ರಿ ಕೊಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಿಂದ ನಾಳಿನ ಕಾರ್ಯಕ್ರಮದಲ್ಲಿ ಡಿಜೆ ಹಾಕಲು ಬರುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದರು. ಬಳಿಕ ಸ್ಥಳಕ್ಕೆ ಮಾಜಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ಗೋವಿಂದ ಕಾರಜೋಳ ಮಗ ಉಮೇಶ್ ಕಾರಜೋಳ, ಪ್ರಬಂಜನ್ ಭೇಟಿ ನೀಡಿ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪೊಲೀಸರು ಹಾಗೂ ಹಿಂದೂ ಮುಖಂಡರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಇದೇ ವೇಳೆ ಉಮೇಶ್ ಕಾರಜೋಳ ಮಾತನಾಡಿ, ನಾವು ನಮ್ಮ ಪಾಡಿಗೆ ಇದ್ದೆವು, ವಾಹನವನ್ನು ತಡೆದು ಕಾನೂನು ಕ್ರಮ ತೆಗೆದುಕೊಳ್ಳಬಹುದಿತ್ತು. ಆದರೆ ಪೊಲೀಸರು ಮಾರ್ಗಮಧ್ಯೆ ತಡೆದು ನಿಲ್ಲಿಸಿ, ನಮ್ಮನ್ನು ಕಾಯುವಂತೆ ಮಾಡುತ್ತಿರುವುದು ಸರಿಯಲ್ಲ. ನಾವು ತಾಳ್ಮೆ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







