ಜೆ ಜಿ ಹಳ್ಳಿ – ಯಲ್ಲದಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಡಿ ಸುಧಾಕರ್ ಭೂಮಿ ಪೂಜೆ.ಗ್ರಾಮೀಣ ರಸ್ತೆಗಳ ಸುಧಾರಣೆಗೆ ಶ್ರಮಿಸಲಾಗುವುದು ಎಂದು ಸಚಿವ ಡಿ ಸುಧಾಕರ್ ಅವರು ಹೇಳಿದರು. ಜೆ ಜಿ ಹಳ್ಳಿ, ಯಲ್ಲದಕೆರೆ, ಓಬಳಾಪುರ, ವೀರವ್ವನಾಗತೀಹಳ್ಳಿ, ಚಿಗಳೀಕಟ್ಟೆವರೆಗೆ 1.58 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಡಿ. ಸುಧಾಕರ್ ಅವರು ಶಂಕುಸ್ಥಾಪನೆ ನೆರವೇರಿಸಿದರು.ಶಂಕು ಸ್ಥಾಪನೆ ಮಾಡಿದ ಬಳಿಕ ಮಾತನಾಡಿದ ಅವರು, ಗ್ರಾಮೀಣ ಸಾರಿಗೆ, ಮೂಲಸೌಕರ್ಯ ಸುಧಾರಿಸಿ ಜನರಿಗೆ ಸುಗಮ ಸಂಚಾರ ಸೌಲಭ್ಯ ಒದಗಿಸಲು ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ರಸ್ತೆಗಳು ಸುರಕ್ಷಿತವಾಗಿದ್ದರೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ ಎಂದರು.ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗ್ರಾಮಸ್ಥರು ಸೇರಿದಂತೆ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







