ಬೆಂಗಳೂರು: ಇತ್ತೀಚೆಗಷ್ಟೇ ದರ ಏರಿಕೆ ಬೆಳವಣಿಗಳಿಂದ ಹೈರಾಣಿಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಹೌದು.. ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.ಮೂಲಗಳ ಪ್ರಕಾರ ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಎಫ್ ಕೆಸಿಸಿಐ ವಿರೋಧ
ಬೆಸ್ಕಾಂ ಪ್ರಸ್ತಾವನೆ ಬಗ್ಗೆ ಎಫ್ ಕೆಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ 1 ರೂಪಾಯಿ ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆಗೆ ಸಾವರ್ಜನಿಕರು, ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







