ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ಸೆಪ್ಟಂಬರ್ 22ರಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಮ್ಯಾಸ ನಾಯಕ ಅಥವಾ ಮ್ಯಾಸ ಬೇಡ ಬುಡಕಟ್ಟು ಜನರು ಅನುಬಂಧ-3ಸಿ, ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿ, Code ಸಂಕೇತ ಸಂಖ್ಯೆ C-38.2 ರ ‘NAYAKA’ ‘ನಾಯಕ’ ಎಂದು ಬರೆಸುವಂತೆ ಮಾಜಿ ಶಾಸಕ ತಿಪ್ಪೇಸ್ವಾಮಿ ಮನವಿ ಮಾಡಿದರು.ನಗರದ ಪತ್ರಿಕಾ ಭವನದಲ್ಲಿ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಅವರು, ಕರ್ನಾಟಕ, ಆಂಧ್ರ ಗಡಿ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯ್ಕಡ ಬುಡಕಟ್ಟಿಗೆ ಸೇರಿದ ನಾಯ್ಕ ಅಥವಾ ನಾಯಕ ಪಂಗಡದವರಾದ ಮ್ಯಾಸ ನಾಯಕ ಅಥವಾ ಮ್ಯಾಸ ಬೇಡರು ನೆಲೆಸಿದ್ದಾರೆ. ಮ್ಯಾಸ ಬೇಡ ಅಥವಾ ಮ್ಯಾಸ ನಾಯಕ ಬುಡಕಟ್ಟು ಜನಾಂಗವು ರಾಜ್ಯದಲ್ಲಿ ವಿಶಿಷ್ಟವಾದ ಬುಡಕಟ್ಟು ಸಂಸ್ಕೃತಿಯನ್ನು ಹೊಂದಿದ ಸಮುದಾಯವಾಗಿದೆ. ಮ್ಯಾಸ ಬೇಡ ಅಥವಾ ಮ್ಯಾಸ ನಾಯಕರು ಮೂಲತಃ ಗೊಂಡವಾನ ಪ್ರದೇಶದ ಬುಡಕಟ್ಟುಗಳಲ್ಲಿ ಒಂದಾದ ‘ಭಿಲ್’ ಬುಡಕಟ್ಟು ಜನಾಂಗದಿಂದ ಬೇರ್ಪಟ್ಟ ‘ನಾಯ್ಕಡ’ ಬುಡಕಟ್ಟಿಗೆ ಸೇರಿರುತ್ತೇವೆ. ಮ್ಯಾಸನಾಯಕ ಬುಡಕಟ್ಟು ಜನಾಂಗವನ್ನು 1976 ರಲ್ಲಿಯೇ ನಾಯಕ ಎಂಬ ಹೆಸರಿನ ಸಮಾನಾರ್ಥಕ ಪದದ ಮೂಲಕ ಭಾರತದ ಸಂಸತ್ತು ಪರಿಶಿಷ್ಟ ಪಂಗಡಕ್ಕೆ ಸೇರಿಸಿದೆ ಎಂದರು.ಆದ್ದರಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ. ವಿಜಯನಗರ ಜಿಲ್ಲೆಯಲ್ಲಿರುವ ಮಾಸನಾಯಕ ಅಥವಾ ಮ್ಯಾಸ ಬೇಡ ಬುಡಕಟ್ಟು ಜನರು ಯಾವುದೇ ಗೊಂದಲಕ್ಕೆ ಒಳಪಡದೆ, ಅನುಬಂಧ-3ಸಿ, ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯ Code ಸಂಖ್ಯೆ C-38.2 ರಲ್ಲಿ ಬರುವ ‘NAYAKA”ನಾಯಕ’ ಎಂದು ಬರೆಯಬೇಕು ಜೊತೆಗೆ ನಮಗೆ ಒಂದು ನಿಗಮ ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ದೊಡ್ಡಮನಿ ಪ್ರಸಾದ್, ಗಾರೇಗಲ್ ಪಾಪಯ್ಯ, ಸಿ.ಎಸ್ ಜೋಗೇಶ್, ಪಿ.ಮಲ್ಲೇಶ್ ಬಣವಿಕಲ್, ಕೆ. ಬಿ ಓಬಣ್ಣ ಮತ್ತಿತರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







