ಕಿಚ್ಚ ಸುದೀಪ್ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಅದೇ ರೀತಿ ಅವರನ್ನು ದ್ವೇಷಿಸೋ ಒಂದು ವರ್ಗ ಕೂಡ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಟ್ರೋಲ್ಗಳನ್ನು ಮಾಡುವ ಕೆಲಸ ಮಾಡಲಾಗುತ್ತಿದೆ. ಹೀಗಿರುವಾಗಲೇ ಸುದೀಪ್ ಅಭಿಮಾನಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುದೀಪ್ ಅವರನ್ನು ಟ್ರೋಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.ಇತ್ತೀಚೆಗೆ ಸೆಲೆಬ್ರಿಟಿಗಳ ಮೇಲಿನ ಟ್ರೋಲ್ ಹೆಚ್ಚಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಮಾನವನ್ನು ಹರಣ ಮಾಡುವ ಕೆಲಸ ಆಗುತ್ತಿದೆ. ಬಹುತೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಸೈಲೆಂಟ್ ಆಗಿರುತ್ತಾರೆ. ಆದರೆ, ಇತ್ತೀಚೆಗೆ ಸೆಲೆಬ್ರಿಟಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಟ್ರೋಲ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿಯಿಂದ ದೂರು ನೀಡಲಾಗಿದೆ. ಟ್ವಿಟ್ಟರ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ಅವರಿಗೆ ವಿಕೃತವಾದ, ವೈಯಕ್ತಿಕ ನಿಂದನೆ ಮಾಡುವವರ ವಿರುದ್ಧ ದೂರು ನೀಡಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.ಸೆಲೆಬ್ರಿಟಿಗಳು ಸಾಮಾನ್ಯವಾಗಿ ಟ್ರೋಲ್ಗಳ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೆಲವೊಮ್ಮೆ ಪರಿಸ್ಥಿತಿ ಕೈ ಮೀರಿದಾಗ ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ, ಸುದೀಪ್ ಅಭಿಮಾನಿಗಳು ಈ ರೀತಿಯ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.ಈ ಮೊದಲು ರಮ್ಯಾ ವಿರುದ್ಧ ಅಶ್ಲೀಲ ಕಮೆಂಟ್ಗಳು ಬಂದಿದ್ದವು. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿತ್ತು. ಇದನ್ನು ಸಹಿಸದ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







