ಚಿತ್ರದುರ್ಗ: ಮೊಳಕಾಲ್ಮುರಿನ ಎಸ್.ಟಿ ಮೋರ್ಚಾ ನಾಯಕನಹಟ್ಟಿ ಮಂಡಲ ಹಿರೇಹಳ್ಳಿ ಗ್ರಾಮ ಪಂಚಾಯತ್
ರುದ್ರಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬದ
ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನದಡಿಯಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ ವಿತರಿಸಲಾಯಿತು.ಈ ಸಂದರ್ಭದಲ್ಲಿ, ನಾಯಕನಹಟ್ಟಿ ಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರು ಹಿರೇಹಳ್ಳಿ ನಾಗರಾಜ್ ಮಂಡಲ ಅಧ್ಯಕ್ಷರಾದ ಮಲ್ಲೇಶಣ್ಣ,ಬಿಜೆಪಿ ಮುಖಂಡರಾದ ಪಾಪೇಶ ನಾಯಕ, ನಿಕಟ ಪೂರ್ವ ಅಧ್ಯಕ್ಷರು ರಾಮರೆಡ್ಡಿ, ಮುಖಂಡರಾದ ಮನ್ನೆಕೋಟೆ ರವಿ, ಪ್ರಕಾಶ ರೆಡ್ಡಿ,ಬೂತ್ ಅಧ್ಯಕ್ಷರು ಆದ ಪೂಜಾರಿ ಓಬಣ್ಣ, ಗ್ರಾಮದ ಮುಖಂಡರಾದ ಬೋರಯ್ಯ, ಮಂಜುನಾಥ್, ಶಿವು ಓಬಣ್ಣ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







