ಬೆಂಗಳೂರು : ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯಿಂದ ಆಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಈ ಹೊಸ ಹೆಲಿಕಾಪ್ಟರ್ನ ಪರಿಶೀಲನೆಯನ್ನು ಬೆಂಗಳೂರಿನ ಜಕ್ಕೂರು ಏರೋಡ್ರೋಮ್ನಲ್ಲಿ ನಡೆಸಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು 2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಈ ಹೆಲಿಕಾಪ್ಟರ್ ಖರೀದಿಸಲಾಗಿದೆ ಎಂಬ ಮಾತುಗಳಿವೆ.
ಆಧುನಿಕ ಸುರಕ್ಷತೆಯ ವಿಶೇಷ ಹೆಲಿಕಾಪ್ಟರ್
ಈ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಧುನಿಕ ಸುರಕ್ಷಾ ವ್ಯವಸ್ಥೆಯನ್ನು ಹೊಂದಿದ್ದು, ಐವರು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳು ಪ್ರಯಾಣಿಸಬಹುದಾಗಿದೆ. ಚಾಪರ್ ಸೀಟ್ ಸೌಲಭ್ಯವಿರುವ ಈ ಹೆಲಿಕಾಪ್ಟರ್ ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸುರಕ್ಷತೆ ಒದಗಿಸುತ್ತದೆ. ಇದರ ಜೊತೆಗೆ, ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನೂ ಹೊಂದಿದೆ. ಸತೀಶ್ ಜಾರಕಿಹೊಳಿ ಅವರು ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ, ಫೋಟೋ ಮತ್ತು ವಿಡಿಯೋ ಹಂಚಿಕೊಂಡಿದ್ದು, “ಶೀಘ್ರವೇ ನಮ್ಮ ಹೊಸ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧವಾಗಲಿದೆ,” ಎಂದು ಬರೆದಿದ್ದಾರೆ. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹನಮಣ್ಣರ ಮತ್ತು ಅಲಿ ಗೊರವನಕೊಳ್ಳ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







