ಚಿತ್ರದುರ್ಗ: ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುμÁ್ಠನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರ ವಹಿಸುತ್ತದೆ.
ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಲಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.ಈಗಾಗಲೇ ಕೆಲವು ಇಲಾಖೆಗಳು ಈ ಕುರಿತು ಕ್ರಮವಹಿಸಿವೆ. ಕೆಲವು ಇಲಾಖೆಗಳಲ್ಲಿ ಈ ಬಗ್ಗೆ ನಿರ್ದೇಶನವಿಲ್ಲ ಎಂಬ ಗೊಂದಲಗಳಿಂದ ಶಾಶ್ವತ ಫಲಕಗಳಲ್ಲಿ ಪ್ರದರ್ಶಿಸದೇ ಇರುವುದು ತಿಳಿದು ಬಂದಿದ್ದು, ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಾಶ್ವತ ಫಲಕದಲ್ಲಿ ಪ್ರದರ್ಶಿಸದೆ ಇರುವ ಇಲಾಖೆಗಳು ಯಾವುದೇ ಗೊಂದಲಗಳಿಗೆ ಆಸ್ಪದ ಕೊಡದೇ ತಕ್ಷಣ ಕ್ರಮಕೈಗೊಂಡು ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ತಮ್ಮ ಇಲಾಖೆಯ ಶಾಶ್ವತ ಫಲಕದಲ್ಲಿ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







