ಮೈಸೂರು:ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದ್ದಾರೆ.ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಇಡೀ ಕುಟುಂಬವೇ ಹಾಜರಾಗಿದೆ. ಖಾಸಗಿ ಹೋಟೆಲಿನಿಂದ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಆಗಮಿಸಿದರೆ ಸಿಎಂ ಮತ್ತು ಸಚಿವರು ಐರಾವತ ಬಸ್ಸಿನಲ್ಲಿ ಆಗಮಿಸಿದರು.ಜಾನಪತ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿದವು. ನಂತರ ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಭಾಗಿಯಾದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







