ಚಿತ್ರದುರ್ಗ: ಕಲಾವಿದರ ರಾಜ್ಯ ಸಮ್ಮೇಳನ ನಡೆಸುವ ಕುರಿತು ಕರ್ನಾಟಕ ರತ್ನ ಡಾ.ರಾಜ್ಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್
ರಾಜ್ಯ ಶಾಖೆ ಚಿತ್ರದುರ್ಗ ವತಿಯಿಂದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಪರಿಷತ್ನ ರಾಜ್ಯಾಧ್ಯಕ್ಷ ಪರಶುರಾಮ್ ಗೊರಪ್ಪರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕಲೆ ಮತ್ತು ಕಲಾವಿದರ ಸಮಸ್ಯೆಗಳನ್ನು ಆಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯಬೇಕಾಗಿರುವುದರಿಂದ ರಾಜ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದೇವೆ. ನಾಡಿನ ನಾನಾ ಭಾಗಗಳಲ್ಲಿರುವ ಕಲಾವಿದರುಗಳನ್ನು ಹಾಗೂ ಡಾ.ರಾಜ್ಕುಮಾರ್ ಕುಟುಂಬದವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗುವುದೆಂದರು.ಕರ್ನಾಟಕ ರತ್ನ ಡಾ.ರಾಜ್ಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ರಾಜ್ಯ ಶಾಖೆ ಕಾರ್ಯಾಧ್ಯಕ್ಷ ಹೆಚ್.ಶಿವಣ್ಣ, ಗೌರವಾಧ್ಯಕ್ಷ ಕೆ.ಬಿ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ರಾಜ್ಯ ಸಂಚಾಲಕ ದಿವು ಶಂಕರ್, ಖಜಾಂಚಿ ಡಿ.ಜಗದೀಶ್, ಗೌರವ ಕಾರ್ಯದರ್ಶಿ ತಿಪ್ಪೇಸ್ವಾಮಿ ಹಾಗೂ ಮಹಿಳಾ ಪದಾಧಿಕಾರಿಗಳಾದ ಯಶೋಧಮ್ಮ, ಉಷಾದೇವಿ, ಶಾಂತಮ್ಮ, ಕಮಲಮ್ಮ, ಸುನಿತಾಗಾಂಧಿ, ಶಾರದಮ್ಮ ಇವರುಗಳು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







