ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆಗೆ ಚಾಲನೆ ನೀಡಲಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದು, ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳಂತೆ ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ.ಬಿಹಾರ ಸರ್ಕಾರದ ಉಪಕ್ರಮವಾದ ಈ ಯೋಜನೆಯು ಮಹಿಳೆಯರನ್ನು ಆತ್ಮನಿರ್ಭರನ್ನಾಗಿ ಮಾಡುವ ಮತ್ತು ಸ್ವಯಂ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ ಮಹಿಳಾ ಸಬಲೀಕರಣಗೊಳಿಸುವ ಗುರಿ ಹೊಂದಿದೆ. ಇದು ರಾಜ್ಯದ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಆರ್ಥಿಕ ನೆರವು ನೀಡುತ್ತದೆ. ಈ ಮೂಲಕ ಅವರು ತಮ್ಮ ಆಯ್ಕೆಯ ಉದ್ಯೋಗ ಅಥವಾ ಜೀವನೋಪಾಯ ಚಟುವಟಿಕೆ ಪ್ರಾರಂಭಿಸಲು ಅನುಕೂಲವಾಗುತ್ತದೆ.ಯೋಜನೆಯಡಿಯಲ್ಲಿ, ಪ್ರತಿ ಫಲಾನುಭವಿಯ ಬ್ಯಾಂಕ್ ಖಾತೆಗೆ ತಲಾ 10,000 ರೂ. ನೇರವಾಗಿ ವರ್ಗಾವಣೆಯಾಗಲಿದೆ. ನಂತರದ ಹಂತಗಳಲ್ಲಿ 2 ಲಕ್ಷ ರೂ.ಗಳ ವರೆಗೆ ಹೆಚ್ಚುವರಿ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ನೆರವನ್ನು ಫಲಾನುಭವಿಗಳು ಕೃಷಿ, ಪಶುಸಂಗೋಪನೆ, ಕರಕುಶಲ ವಸ್ತುಗಳು, ಟೈಲರಿಂಗ್, ನೇಯ್ಗೆ ಮತ್ತು ಇತರ ಸಣ್ಣ ಪ್ರಮಾಣದ ಉದ್ಯಮ ಸೇರಿದಂತೆ ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ಬಳಸಿಕೊಳ್ಳಬಹುದು ಎಂದು ಸರ್ಕಾರ ಸಲಹೆ ನೀಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







