ಚಿತ್ರದುರ್ಗ: ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿ ನಿರತರ ಸಂಘ ಚಿತ್ರದುರ್ಗ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ನಾಗರಿಕರಿಗೆ ಉಚಿತವಾಗಿ ಬೊಂಬೆಗಳ ಪ್ರದರ್ಶನಕ್ಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಬೊಂಬೆಗಳನ್ನು ಕೂರಿಸಿರುವವರು ಮನೆಯ ವಿಳಾಸ, ಫೋನ್ ನಂಬರ್, ಲೋಕೇಶನ್ನೊಂದಿಗೆ ಸೆಪ್ಟಂಬರ್ 27ರೊಳಗೆ ನಮ್ಮ ಸಂಚಾಲಕರಿಗೆ ಹೆಸರುಗಳನ್ನು ನೊಂದಾಯಿಸಬಹುದಾಗಿದೆ. ಸೆ.29 ರಂದು ಬೆಳಿಗ್ಗೆ 8 ಗಂಟೆಗೆ ವಾಸವಿ ಮಹಲ್ ರಸ್ತೆಯಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಬಹುಮಾನಗಳನ್ನು ನೀಡಲಾಗುವುದು.
ಮೊದಲನೆ ಬಹುಮಾನ : 3000 ರೂ. ಎರಡನೆ ಬಹುಮಾನ : 2000 ರೂ. ಮೂರನೆ ಬಹುಮಾನ : 1000 ರೂ.ಗಳನ್ನು
ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ : 9916277218, 9448588849 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಚಾಲಕರಾದ
ಪಿ.ಎನ್.ಮೋಹನ್ ಕುಮಾರ್ ಗುಪ್ತ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







