ಬೆಂಗಳೂರು: ಬೆಂಗಳೂರು ಹಾಗೂ ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಸಮ್ಮತಿಸಿದೆ. ಇದರೊಂದಿಗೆ ಉಭಯ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಶೀಘ್ರ ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭಿಸಲಾ ಗುವುದು. ಈ ನಗರಗಳ ಸ್ಟೇಷನ್ಸಾಮರ್ಥ ಹೆಚ್ಚಳ ಪರಿಣಾಮ ಈ ರೈಲುಗಳು ಸಂಚಾರ ಸಾಧ್ಯ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಸದ್ಯ ಈ ಎರಡು ನಗರ ಗಳ ನಡುವೆ ಉದ್ಯಾನ ಎಕ್ಸ್ಪ್ರೆಸ್ ರೈಲು ಸಂಚಾರ ವಿದ್ದು, 24 ಗಂಟೆ ಪ್ರಯಾಣ ಮಾಡಬೇಕಾ ಗಿದೆ. ಹೊಸ ರೈಲು ಸೇವೆಯಿಂದ ಪ್ರಯಾಣ ಲಕ್ಷಾಂತರ ಜನರಿಗೆ ಅನುಕೂಲಕರವಾಗಲಿದೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







