ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಜಿಲ್ಲೆ ನೂತನವಾಗಿ ಬಿಜೆಪಿ ಚಿತ್ರದುರ್ಗ ನಗರ ಯುವ ಮೋರ್ಚಾ ಅಧ್ಯಕ್ಷರಾಗಿ ಎಂ. ವಸಂತ್ ಆಚಾರ್ ಅವರು ನೇಮಕಗೊಂಡಿದ್ದಾರೆ.ಸುಮಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ವಸಂತ್ ಆಚಾರ್ ದುಡಿದಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಯುವಕರ ಪಾತ್ರ ಮುಖ್ಯವಾಗಿದ್ದು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ವಸಂತ್ ಆಚಾರ್ ಅವರನ್ನು ಪಕ್ಷ ಆಯ್ಕೆ ಮಾಡಿದೆ. ಪಕ್ಷದ ಆದೇಶಕ್ಕೆ ವಸಂತ್ ಆಚಾರ್ ಸಂತಸ ವ್ಯಕ್ತಪಡಿಸಿದ್ದು, ನನ್ನನ್ನು ಪಕ್ಷ ಗುರುತಿಸಿ ಸ್ಥಾನಮಾನ ನೀಡಿದ್ದು, ಯುವ ಮೋರ್ಚಾ ಅಧ್ಯಕ್ಷನಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತೇನೆ. ಮುಂಬರುವ ಚುನಾವಣೆಯಲ್ಲಿ ಕಮಲ ಅರಳಿಸುವಲ್ಲಿ ತಳ ಮಟ್ಟದಿಂದ ಯುವಕರು ಹಾಗೂ ಹಿರಿಯ ಮುಖಂಡರ ಜೊತೆಗೂಡಿ ಪಕ್ಷ ಸಂಘಟನೆ ಮಾಡುವುದಾಗಿ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







