ಚಳ್ಳಕೆರೆ: ರಾಜ್ಯ ಸರ್ಕಾರ ಎಸ್ಟಿ ಮೀಸಲಾತಿಗೆ ಕುರುಬ ಸಮಾಜವನ್ನು ಸೇರ್ಪಡೆ ಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಿರುವ ವಾಲ್ಮೀಕಿ ಸಮುದಾಯದ ಮುಖಂಡರು ಅ. 4ರಂದು ತಾಲ್ಲೂಕು ಮಟ್ಟದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುವ ಬಗ್ಗೆ ಈಗಾಗಲೇ ಪತ್ರಿಕಾಗೋಷ್ಠಿ ನಡೆಸಿದ್ದು, ಪ್ರತಿಭಟನೆಯನ್ನು ಯಶಸ್ವಿ ಮಾಡಲು ತಾಲ್ಲೂಕಿನಾದ್ಯಂತ ಪ್ರಚಾರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಮಾಜಿ ಸದಸ್ಯ, ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಸಿ.ಟಿ.ಶ್ರೀನಿವಾಸ್ ತಿಳಿಸಿದರು.ಭಾನುವಾರ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಸಮುದಾಯದ ಜಾಗೃತ ಜಾಥ ರಥಕ್ಕೆ ಚಾಲನೆ ನೀಡಿ ಮಾತನಾಡಿ, ತಾಲ್ಲೂಕಿನಾದ್ಯಂತ ವಿವಿಧ ಗ್ರಾಮಗಳಿಗೆ ಜಾಗೃತರಥ ತೆರಳಿದೆ. ರಥದಲ್ಲಿ ಸಮುದಾಯದ ಅನೇಕ ಮುಖಂಡರು ಹಳ್ಳಿ, ಹಳ್ಳಿಗೆ ತೆರಳಿ ವಾಲ್ಮೀಕಿ ಸಮುದಾಯವನ್ನು ಜಾಗೃತಿಗೊಳಿಸುವರು.ಈಗಾಗಲೇ ತಾಲ್ಲೂಕಿನಾದ್ಯಂತ ಪ್ರತಿಭಟನೆ ಕಾವು ಏರುತ್ತಿದ್ದು ಅ.4ರಂದು ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳು ಮುಂದುವರೆದಿವೆ ಎಂದರು.
ಪ್ರತಿಭಟನೆಯ ಸಂಘಟನಕಾರ ಸ್ವಪ್ನ ವೆಂಕಟೇಶ್ ಮಾತನಾಡಿ, ಪ್ರತಿಭಟನೆಯಲ್ಲಿ ವಾಲ್ಮೀಕಿ ಸಮುದಾಯದ ಸರ್ವರೂ ಪಾಲ್ಗೊಳ್ಳುವುದಲ್ಲದೆ, ವಿವಿಧ ಪಕ್ಷಗಳ ನೇತಾರರು, ವಿವಿಧ ಪಕ್ಷಗಳಲ್ಲಿ ಜವಾಬ್ದಾರಿ ಹೊತ್ತವರು ವಾಲ್ಮೀಕಿ ಸಮುದಾಯದ ಎಲ್ಲಾ ಹಂತದ ಮುಖಂಡರು ತಾಲ್ಲೂಕು ನಾಯಕ ಮತ್ತು ವಾಲ್ಮೀಕಿ ಟ್ರಸ್ಟ್ನ ಎಲ್ಲಾ ಮುಖಂಡರು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಪ್ರತಿಭಟನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದರು. ನಿವೃತ್ತ ಶಿಕ್ಷಕ ಕೆ.ಸೂರನಾಯಕ, ಎಂ.ಚೇತನ್ಕುಮಾರ್, ಬೋರಯ್ಯ, ಸೂರ್ಯ ಪ್ರಭಾ, ಯಶೋಧಮ್ಮ, ಸುಧಾಕರ್, ದೊಡ್ಡ ಮಂಜಣ್ಣ, ಪಾಪಣ್ಣ, ಡಾ.ಹರೀಶ್, ಪ್ರಸನ್ನಕುಮಾರ್, ಪಾಪಣ್ಣ, ಶ್ರೀನಿವಾಸ್, ರೋಹಿತಾ, ರಘು, ಸಂದೀಪ್, ಜಗಲೂರಯ್ಯ ಮುಂತಾದವರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







