ಚಿತ್ರದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಎಂ.ಡಿ.ಆಶ್ವಕ್ ಆಲಿಯವರನ್ನು ಕರ್ನಾಟಕ ಪ್ರದೇಶ
ಕಾಂಗ್ರೆಸ್ ಸಮಿತಿಯ ಕಾರ್ಯಾದ್ಯಕ್ಷರಾದ ಬಿ.ಸಿ.ಚಂದ್ರೇಶೇಖರ್ ರವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್ ಪೀರ್
ರವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಅವರಿಗೆ ನೇಮಕಾತಿ ಪತ್ರವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಜ್ ಪೀರ್ ಈಗ ನೇಮಕಾತಿ ಪತ್ರವನ್ನು ಪಡೆದು ಮನೆಯಲ್ಲಿ ಇರದೆ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವತ್ತಾ ಗಮನ ನೀಡಬೇಕಿದೆ ಇವರು ಎನ್.ಎಸ್.ಯು.ಐ, ಹಾಗೂ ಯುವ ಕಾಂಗ್ರೆಸ್ನಲ್ಲಿ ಕೆಲಸ ಮಾಡಿದ ಅನುಭವ ಇದೆ, ಇಂತಹರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ಉತ್ತಮವಾಗಿದೆ, ಪಕ್ಷದ ಸಂಘಟನೆಯಲ್ಲಿ ತೂಡಗುವಂತೆ ಕರೆ ನೀಡಿದರು.ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡ ಎಂ.ಡಿ.ಆಶ್ವಕ್ ಆಲಿ ಮಾತನಾಡಿ ನನ್ನನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ
ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ನನಗೆ ಸಂತೋಷವನ್ನು ತಂದಿದೆ, ನನಗೆ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ ಅನುಭವ ಇದೆ, ಮುಂದಿನ ದಿನಮಾನದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವತ್ತ ಗಮನ ನೀಡಲಾಗುವುದಲ್ಲದೆ ಮುಂಬರುವ ಜಿ.ಪಂ.ತಾ.ಪಂ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಇತರೆ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವುವಿಗೆ ಸಹಕಾರಿಯಾಗಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರವಿಕುಮಾರ್, ಮಂಜುನಾಥ್ ಗುಪ್ತ, ವೆಂಕಟೇಶ್, ಖುದ್ದುಸ್, ಮಲ್ಲಿಕಾರ್ಜನ್, ನವಾಬ್, ಸಾಧಿಕ್, ಸಂತೋಷ್ ಕಲ್ಲಹಳ್ಳಿನ ರಘು, ವಾಸಿಂ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







