ಚಿತ್ರದುರ್ಗ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ದಾವಣಗೆರೆ ಜಲ್ಲೆಯ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಚಿತ್ರದುರ್ಗ ನಗರದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಮಾಜಿ ಸಚಿವ ಎಚ್.ಆಂಜನೇಯ, ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಲ್.ಎ.ಕೃಷ್ಣನಾಯಕ್, ಉಪ ಕಾರ್ಯದರ್ಶಿ ಸತೀಶ್ ರೆಡ್ಡಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







