ಚಿತ್ರದುರ್ಗ :ಚಿತ್ರದುರ್ಗ ಕೋಟೆಯ ಇತಿಹಾಸವನ್ನು ಸಾರುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯವಾಗಿದುದ್ದು ಎಂದು ರಾಷ್ಟ್ರೀಯ ಹೆದ್ದಾರಿ-48ರ ತಹಶೀಲ್ದಾರ್ ನಾಗವೇಣಿ ಹೇಳಿದರು. ನಗರದ ಕೆ.ಎಸ್.ಟಿ.ಡಿ.ಸಿ, ಮಯೂರ ದುರ್ಗ ಹೋಟೆಲ್ನಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾರ್ಗದರ್ಶಿಗಳು ಪ್ರವಾಸಿಗರಿಗೆ ಸೂಕ್ತ ಹಾಗೂ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಚಿತ್ರದುರ್ಗ ಗತಿ ಇತಿಹಾಸವನ್ನು ಕಣ್ಣೆದುರು ತೆರೆದಿಡುವ ಕೆಲಸ ಮಾಡಬೇಕು. ಕೋಟೆ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ಶುಚ್ಛಿತ್ವವನ್ನು ಕಾಪಾಡಿಕೊಳ್ಳಬೇಕು. ಪ್ರವಾಸಿಗರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಬೇಕು. ಹೆಚ್ಚು ಹೆಚ್ಚು ಪ್ರವಾಸಿಗರು ಜಿಲ್ಲೆ ಆಗಮಿಸಿದಷ್ಟು ಜಿಲ್ಲೆ ಪ್ರಗತಿ ಕಾಣಲಿದೆ. ಹೆಚ್ಚು ಪ್ರಚಲಿತವಿಲ್ಲದ ಜಿಲ್ಲೆಯ ಪ್ರವಾಸಿ ತಾಣಗಳನ್ನು ಸಹ ಹೊರಜಗತ್ತಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ನಾಗವೇಣಿ ತಿಳಿಸಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಹೆಚ್. ಶಶಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಶ್ರೀಮಂತ ಇತಿಹಾಸ, ವಾಸ್ತುಶಿಲ್ಪ, ಸಾಂಸ್ಕøತಿಕ ಪರಂಪರೆ, ಮತ್ತು ಪ್ರಕೃತಿ ಸೌಂದರ್ಯವನ್ನು ಪ್ರದರ್ಶಿಸುವ ಮೂಲಕ ಆರ್ಥಿಕ ಮತ್ತು ಸಾಮಾಜಿಕ ಬೆಳಣಿಗೆಗೆ ಪ್ರಮುಖ ಕೊಡುಗೆ ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ 2024-29 ರ ಪ್ರವಾಸೋದ್ಯಮ ನೀತಿಯಲ್ಲಿ 39 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದರು. ಮಯೂರ ದುರ್ಗ ಹೋಟೆಲ್ ವ್ಯವಸ್ಥಾಪಕ ಚೇತನ್ ಮಾತನಾಡಿ, ಪ್ರವಾಸೋದ್ಯಮವು ಜನರಿಗಾಗಿ ಮಾಡಿದ ಉದ್ಯಮ ಎಂದು ಪರಿಗಣಿಸಲ್ಪಟ್ಟಿದೆ. ಇದು ಜನರ ನಡುವಿನ ಉತ್ತಮ ಬಾಂಧ್ಯವನ್ನು ಬೆಳೆಸುತ್ತದೆ ಎಂದು ತಿಳಿಸಿದರು. ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ಎಂಬ ಧ್ಯೇಯ ವಾಕ್ಯದೊಂದಿಗೆ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೋಟೆಗೆ ಭೇಟಿ ನೀಡಿದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ ಹೂ ಮತ್ತು ಸಿಹಿಯನ್ನು ನೀಡಿ ಅಭಿನಂದಿಸಲಾಯಿತು. ಜ್ಯೋತಿ ರಾಜ್ ಅಲಿಯಾಸ್ ಕೋತಿರಾಜ್ ರವರಿಗೆ ಸನ್ಮಾನಿಸಲಾಯಿತು. ವಿವಿಧ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪ್ರವಾಸಿ ಮಿತ್ರರಿಗೆ, ಭಾರತೀಯ ಪುರಾತತ್ವ ಇಲಾಖೆಯ ಸಿಬ್ಬಂದಿಗಳಿಗೆ, ಪ್ರವಾಸಿ ಮಾರ್ಗದರ್ಶಿಗಳಿಗೆ ಪದಕಗಳನ್ನು ವಿತರಿಸಲಾಯಿತು. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಮನು.ಕೆ.ಆರ್ ಸ್ವಾಗತಿಸಿದರು. ಬಿ.ಮೊಹಿದ್ದೀನ್ ಖಾನ್ ನಿರೂಪಿಸಿದರು. ಬಸವರಾಜ್.ಟಿ ವಂದಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







