ಹಾಲಿ ಐಪಿಎಲ್ ಚಾಂಪಿಯನ್ RCB ಫ್ರಾಂಚೈಸಿಯಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ಆರ್ ಸಿಬಿ ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ನ ಪೋಷಕ ಸಂಸ್ಥೆ ಡಿಯಾಜಿಯೊ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿರುವ ಪಾಲನ್ನು ಮಾರಾಟ ಮಾಡಲು ಯೋಚನೆ ಮಾಡುತ್ತಿದೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿದೆ.
ಡಿಯಾಜಿಯೊ ಸಂಭಾವ್ಯ ಸಲಹೆಗಾರರೊಂದಿಗೆ ಸಾಧ್ಯತೆಗಳನ್ನು ಚರ್ಚಿಸುತ್ತಿದ್ದು, 17,000 ಕೋಟಿ ರೂಪಾಯಿಗಳ ಮೌಲ್ಯಮಾಪನದ ನಿರೀಕ್ಷೆ ಇರಬಹುದು ಎನ್ನಲಾಗಿದೆ. ಈ ಕುರಿತು ಇನ್ನೂ ಯಾವುದೇ ನಿರ್ಧಾರ ಅಂತಿಮವಾಗಿಲ್ಲವಾದರೂ ತಂಡ ಷೇರು ಮಾರಾಟದ ಬಗೆಗೆ ಆಗಾಗ ಸುದ್ದಿಗಳು ಕೇಳಿ ಬರುತ್ತಲೇ ಇವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







