ದೆಹಲಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಸ್ತುತ ದಿನಮಾನಗಳ ರಾವಣನ ಸಂಕೇತದಂತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.ಮೋದಿ ತಮ್ಮ ಚಿನ್ನದ ಅರಮನೆ ನಿರ್ಮಿಸುತ್ತಿದ್ದಾರೆ. ಅದರೊಳಗೆ ಒಮ್ಮೆ ಪ್ರವೇಶಿಸಿದ ನಂತರ ಅವರೇ ಸುಟ್ಟು ಹೋಗುತ್ತಾರೆ ಎಂದು ಕಟುಟೀಕೆ ಮಾಡಿದ್ದಾರೆ. ಮತ್ತೊಬ್ಬ ಕಾಂಗ್ರೆಸ್ ನಾಯಕ ಸಂಜಯ್ ರಾವತ್ ಸಹ ದೆಹಲಿಯ ರಾವಣನನ್ನು ದಹಿಸಬೇಕು. ದೆಹಲಿಯ ರಾವಣನನ್ನು ದಹಿಸುವ ದಿನ ಸಮೀಪದಲ್ಲಿದೆ. ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಇಷ್ಟರಲ್ಲೇ ಅವರು ನಿರ್ಮಿಸ ಹೊರಟಿರುವ ಲಂಕೆಯಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿ ಕಿಡಿಕಾರಿರುರುವ ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ವ್ಯಕ್ತಿಯ ಮೇಲಿನ ದ್ವೇಷದಿಂದ ಕುರುಡಾಗಿ ಕಾಂಗ್ರೆಸ್ ಪಕ್ಷ ಸಾಂವಿಧಾನಿಕ ಹುದ್ದೆಗಳ ದೊಡ್ಡತನವನ್ನು ಮರೆತುಬಿಡುತ್ತದೆ. ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಮೋದಿ ವಿರೋಧಿ ಹಾಗೂ ಭಾರತ ವಿರೋಧಿ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







