ಶತಾಯ ಗತಾಯ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ವಿರಾಮ ಇಡಲು ಶೀಘ್ರಗತಿಯಲ್ಲಿ ಮುಂದಾಗಿರುವ ರಾಜ್ಯ ಸರ್ಕಾರ ಸಮಿಕ್ಷೆಯಲ್ಲಿ ಭಾಗವಹಿಸದ ಅಧಿಕಾರಿಗಳ ಮೇಲೆ ದಾಖಲಿಸುವ ಎಚ್ಚರಿಕೆ ನೀಡಿದೆ.
ಈ ಕುರಿತು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ಪೋರ್ಟಲ್ನಲ್ಲಿನ ಸರ್ಕಾರಿ ಸಿಬ್ಬಂದಿಗಳ ವಿವರವನ್ನು ರಾಜ್ಯ ಸರ್ಕಾರ ಬಳಸಿಕೊಂಡಿದ್ದು ಕಚೇರಿಯ ಸಿಬ್ಬಂದಿಗಳಿಗೆ ಪ್ರತ್ಯೇಕ ಸಂದೇಶ, ಇ-ಮೇಲ್ ರವಾನಿಸಿದೆ. ಸಮೀಕ್ಷೆಗೆ ನಿಯೋಜನೆಗೊಂಡಿರುವ ಮಾಹಿತಿ ಜೊತೆಗೆ, ಹಾಜರಾಗದಿದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಅಕ್ಟೋಬರ್ 3 ರಂದು ತರಬೇತಿ, 4ರಂದು ಜನಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಸಿಬ್ಬಂದಿಗಳಿಗೆ ಆದೇಶಿಸಿದೆ. ಸಮೀಕ್ಷೆಗೆ ಹಾಜರಾಗದಿದ್ದರೆ ಬಿಎನ್ಎಸ್ ಸೆಕ್ಷನ್ 223ರ ಅಡಿ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಿದೆ.
ಬೆಂಗಳೂರು ಪ್ರಾಧಿಕಾರದ ಆಯುಕ್ತರು ಲಿಖಿತವಾಗಿ ಒಪ್ಪಿಗೆ ನೀಡದಿದ್ದರೆ, ಯಾವುದೇ ವಿನಾಯಿತಿಗಳನ್ನು ನೀಡಲಾಗುವುದಿಲ್ಲ ಎಂದು ಸಹ ತಿಳಿಸಿದೆ.
ಸರ್ಕಾರದ ಈ ಸೂಚನೆ ಸರ್ಕಾರಿ ಅಧಿಕಾರಿಗಳಲ್ಲಿ ಬೇಸರ ಹಾಗೂ ಕಳವಳವನ್ನುಂಟು ಮಾಡಿದೆ. ಜನಗಣತಿಗಾಗಿ ಎಲ್ಲಾ ಖಾಯಂ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿರುವುದರಿಂದ, ಸರ್ಕಾರಿ ಕೆಲಸವನ್ನು ಗುತ್ತಿಗೆ ನೌಕರರೇ ಮಾಡುವಂತಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







