ಉತ್ತರ ಬಂಗಾಳದ ಡಾರ್ಜಿಲಿಂಗ್ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ 14 ಜನ ಆಹುತಿಯಾಗುದ್ದು ಸೇತುವೆ, ರಸ್ತೆಗಳು ಕುಸಿದಿವೆ. ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ಪೊಲೀಸರು ಮತ್ತು ಸ್ಥಳೀಯ ಆಡಳಿತವು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವಿಪತ್ತಿನ ಪರಿಣಾಮ ಸಿಕ್ಕಿಂನ ಸಂಪರ್ಕವು ಕಡಿತಗೊಂಡಿದೆ ಎಂದು ವರದಿಯಾಗಿದೆ.ಭೂಕುಸಿತದ ಪರಿಣಾಮ ಡಾರ್ಜಿಲಿಂಗ್ ನಿಂದ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಸ್ತೆಗಳು ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಟೈಗರ್ ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಡಾರ್ಜಿಲಿಂಗ್ನ ಪ್ರವಾಸಿ ತಾಣಗಳನ್ನು ಮುಚ್ಚಲು ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತ ನಿರ್ಧರಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







